![](https://kannadadunia.com/wp-content/uploads/2023/06/application-web-780x405-1-1.jpg)
ಕೇಂದ್ರ ಸರ್ಕಾರ ಅಭಿವೃದ್ಧಿಪಡಿಸಿರುವ ಇ-ಶ್ರಮ್ ಪೋರ್ಟಲ್ನಲ್ಲಿ ಅಸಂಘಟಿತ ವರ್ಗಗಳ ಕಾರ್ಮಿಕರನ್ನು ನೋಂದಾಯಿಸಲು ಅವಕಾಶವನ್ನು ಕಲ್ಪಿಸಲಾಗಿದೆ. ಆದ್ದರಿಂದ ಜಿಲ್ಲೆಯ ಅಸಂಘಟಿತ ಕೈಮಗ್ಗ ಹಾಗೂ ವಿದ್ಯುತ್ಮಗ್ಗ ನೇಕಾರರು, ನೇಕಾರ ಕಾರ್ಮಿಕರು ನೋಂದಾಯಿಸಿಕೊಳ್ಳುವಂತೆ ಕೊರಲಾಗಿದೆ.
ಸಾಮಾನ್ಯ ಸೇವಾ ಕೇಂದ್ರ ಅಥವಾ ಆ್ಯಪ ಮೂಲಕ ಸ್ವಯಂ ನೋಂದಾಯಿಸಿಕೊಳ್ಳುವಂತೆ ತಿಳಿಸಲಾಗಿದೆ. ನೋಂದಾಯಿಸಿದ ಅಭ್ಯರ್ಥಿಗಳಿಗೆ ತಕ್ಷಣ ಸ್ಥಳದಲ್ಲೆ ಗುರುತಿನ ಚೀಟಿ ನೀಡುವ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂ.ಸಂ.0836-2448834 ಸಂಪರ್ಕಿಸಬಹುದು ಎಂದು ಕೈಮಗ್ಗ ಮತ್ತು ಜವಳಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.