HomeKarnatakaಮಂಗಳೂರು ಸೇರಿ ದೇಶದ ವಿವಿಧ ವಿಮಾನ ನಿಲ್ದಾಣಗಳಿಗೆ ಬಾಂಬ್‌ ಬೆದರಿಕೆ : ಬಿಗಿ ಭದ್ರತೆ

ಮಂಗಳೂರು ಸೇರಿ ದೇಶದ ವಿವಿಧ ವಿಮಾನ ನಿಲ್ದಾಣಗಳಿಗೆ ಬಾಂಬ್‌ ಬೆದರಿಕೆ : ಬಿಗಿ ಭದ್ರತೆ

ಮಂಗಳೂರು: ಮಂಗಳೂರು ವಿಮಾನ ನಿಲ್ದಾಣವೂ ಸೇರಿದಂತೆ ದೇಶದ ವಿವಿಧ ವಿಮಾನ ನಿಲ್ದಾಣಗಳಿಗೆ ಬಾಂಬ್‌ ಇಟ್ಟಿದ್ದೇವೆ ಎಂಬ ಬೆದರಿಕೆ ಸಂದೇಶ ಬಂದಿದ್ದು, ಪೊಲೀಸರು ಎಲ್ಲೆಡೆ ಕಟ್ಟೆಚ್ಚರ ವಹಿಸಿದ್ದಾರೆ.

ಬಜಪೆಯ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸೇರಿದಂತೆ ದೇಶದ ವಿವಿಧ ವಿಮಾನ ನಿಲ್ದಾಣಗಳಿಗೆ ಬಾಂಬ್‌ ಬೆದರಿಕೆಗೆ ಸಂಬಂಧಿಸಿ ಡಿ. 26ರಂದು ರಾತ್ರಿ 12 ಗಂಟೆ ಸುಮಾರಿಗೆ ಇಮೇಲ್ ಸಂದೇಶ ಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬೆದರಿಕೆ ಇಮೇಲ್‌ ನಲ್ಲಿ ನಿಮ್ಮಲ್ಲಿರುವ ವಿಮಾನವೊಂದರಲ್ಲಿ ಅಷ್ಟೇ ಅಲ್ಲ, ವಿಮಾನ ನಿಲ್ದಾಣದ ಒಳಗೆ ಸ್ಫೋಟಕ ವಸ್ತು ಇದೆ. ಕೆಲವೇ ಗಂಟೆಗಳಲ್ಲಿ ಅದು ಸ್ಫೋಟಿಸಲಿದೆ. ನಿಮ್ಮನ್ನೆಲ್ಲ ಕೊಂದು ಹಾಕುತ್ತೇನೆ’ ಎಂಬ ಸಂದೇಶ ಇತ್ತು.

ಈ ಕುರಿತು ಮಾಹಿತಿ ಸಿಕ್ಕ ತಕ್ಷಣವೇ ವಿಮಾನ ನಿಲ್ದಾಣದಲ್ಲಿ ಸ್ಫೋಟಕ ವಸ್ತು ಪತ್ತೆಗೆ ಬಾಂಬ್‌ ನಿಷ್ಕ್ರಿಯ ದಳದಿಂದ ಸಮಗ್ರ ತಪಾಸಣೆ ನಡೆಸಿಸಲಾಗಿದ್ದು, ವಿಮಾನ ನಿಲ್ದಾಣಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular