ಬೆಂಗಳೂರು: ವಕ್ಫ್ ಆಸ್ತಿಗಳ ಒತ್ತುವರಿ ಬಗ್ಗೆ ಪರಿಶೀಲಿಸಲು ಖಾಸಗಿ ಸಂಸ್ಥೆಯಿಂದಲೂ ಪ್ರತ್ಯೇಕ ಸಮೀಕ್ಷೆ ನಡೆಸಲಾಗುವುದು ಎಂದು ವಕ್ಫ್, ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿದ್ದಾರೆ.
ಅಲ್ಪಸಂಖ್ಯಾತರ ಕಲ್ಯಾಣ ನಿರ್ದೇಶನಾಲಯದಲ್ಲಿ ಅಧಿಕಾರಿಗಳ ಸಭೆ ನಡೆಸಿದ ಸಚಿವರು, ಖಾಸಗಿ ಸಂಸ್ಥೆ ನೀಡುವ ಸಮೀಕ್ಷಾ ವರದಿ, ಅಧಿಕಾರಿಗಳು ನೀಡುವ ವರದಿ ತಾಳೆ ಆಗಬೇಕು. ಇಲ್ಲದಿದ್ದಲ್ಲಿ ಸಂಬಂಧಿಸಿದ ಅಧಿಕಾರಿಗಳನ್ನು ಅಮಾನತು ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಪ್ರತಿ ಜಿಲ್ಲೆ, ತಾಲೂಕುಗಳಲ್ಲಿ ವಕ್ಫ್ ಆಸ್ತಿ ಒತ್ತುವರಿಗೆ ಸಂಬಂಧಿಸಿದಂತೆ ಒಂದು ತಿಂಗಳಲ್ಲಿ ವರದಿ ಸಲ್ಲಿಸಲು ಸಚಿವರು ಗಡುವು ನೀಡಿದ್ದಾರೆ. ಜಿಲ್ಲಾವಾರು ವಕ್ಪ್ ಆಸ್ತಿಗಳ ಸರ್ಕಾರಿ ಒತ್ತುವರಿ, ಖಾಸಗಿ ಒತ್ತುವರಿ, ನ್ಯಾಯಾಲಯದಲ್ಲಿರುವ ಪ್ರಕರಣಗಳು ಸೇರಿದಂತೆ ವಕ್ಫ್ ಆಸ್ತಿಗಳಿಗೆ ಸಂಬಂಧಿಸಿದ ಸಮಗ್ರ ಮಾಹಿತಿಯನ್ನು ಅಧಿಕಾರಿಗಳು ಸಲ್ಲಿಸಬೇಕು ಎಂದು ಸೂಚಿಸಿದ್ದಾರೆ.