alex Certify ಡಿಪ್ಲೋಮಾ, ಪದವೀಧರರೇ ಗಮನಿಸಿ : ‘ಯುವ ನಿಧಿ ಯೋಜನೆʼಗೆ ಆನ್‍ಲೈನ್ ನಲ್ಲಿ ಈ ರೀತಿ ಅರ್ಜಿ ಸಲ್ಲಿಸಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಡಿಪ್ಲೋಮಾ, ಪದವೀಧರರೇ ಗಮನಿಸಿ : ‘ಯುವ ನಿಧಿ ಯೋಜನೆʼಗೆ ಆನ್‍ಲೈನ್ ನಲ್ಲಿ ಈ ರೀತಿ ಅರ್ಜಿ ಸಲ್ಲಿಸಿ

ಬೆಂಗಳೂರು : ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ಮುಖಾಂತರ ಸರ್ಕಾರದ ಮಹತ್ತರ ಖಾತರಿ ಯೋಜನೆಯಾದ “ಯುವನಿಧಿ” ಯೋಜನೆಯ ನೋಂದಣಿ ಪ್ರಕ್ರಿಯೆಗೆ ಈಗಾಗಲೇ ಚಾಲನೆ ದೊರೆತಿದೆ.

2023 ರಲ್ಲಿ ಪದವಿ/ಡಿಪ್ಲೋಮಾ ಉತ್ತೀರ್ಣರಾಗಿ 6 ತಿಂಗಳಾದರೂ ಸರ್ಕಾರಿ/ಖಾಸಗಿ/ಸ್ವಯಂ ಉದ್ಯೋಗ ಹೊಂದಿಲ್ಲದವರು ಮತ್ತು ಉನ್ನತ ವಿದ್ಯಾಭ್ಯಾಸ ಮುಂದುವರೆಸದೆ ಇರುವ ವಿದ್ಯಾರ್ಥಿಗಳು ಕರ್ನಾಟಕ ಒನ್, ಗ್ರಾಮ ಒನ್, ಮತ್ತು ಬಾಪೂಜಿ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ http://sevasindhugs.karnataka.gov.in ಪೋರ್ಟಲ್ ಮೂಲಕ ಉಚಿತವಾಗಿ “ಯುವನಿಧಿ” ಯೋಜನೆಗೆ ಅರ್ಜಿ ಸಲ್ಲಿಸಬಹುದು.

ಪದವೀಧರರಿಗೆ ಪ್ರತಿ ತಿಂಗಳು 3,000 ರೂ.ಗಳು ಹಾಗೂ ಡಿಪ್ಲೋಮಾ ಪದವೀಧರರಿಗೆ 1500 ರೂ.ಗಳನ್ನು ನಿರುದ್ಯೋಗ ಭತ್ಯೆಯನ್ನಾಗಿ ಉದ್ಯೋಗ ಸಿಗುವವರೆಗೆ ಅಥವಾ ಗರಿಷ್ಠ 2 ವರ್ಷಗಳವರೆಗೆ ನೀಡಲಾಗುತ್ತದೆ.  ಹೆಚ್ಚಿನ ಮಾಹಿತಿಗೆ ಸಹಾಯವಾಣಿ ಸಂಖ್ಯೆ 18005999918 ಗೆ ಕರೆ ಮಾಡಬಹುದು.

ಯುವ ನಿಧಿ ಯೋಜನೆ ಅರ್ಜಿ ನೋಂದಣಿ ಪ್ರಕ್ರಿಯೆ

http://sevasindhugs.karnataka.gov.in ಪೋರ್ಟಲ್ ಗೆ ಭೇಟಿ ನೀಡಿ

‘ಯುವ ನಿಧಿ ಯೋಜನೆ’ ಆಯ್ಕೆಯ ಮೇಲೆ ಕ್ಲಿಕ್ ಮಾಡಿ.

‘ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ’ ಆಯ್ಕೆ ಮಾಡಿ.

ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಮತ್ತು ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಿ.

ಸ್ವೀಕೃತಿ ಸಂಖ್ಯೆಯನ್ನು ಸ್ವೀಕರಿಸಲು ‘ಸಲ್ಲಿಸು’ ಬಟನ್ ಕ್ಲಿಕ್ ಮಾಡಿ.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...