alex Certify ಡಿಪ್ಲೋಮಾ, ಪದವೀಧರರೇ ಗಮನಿಸಿ : ʻಯುವನಿಧಿʼ ನೋಂದಣಿಗೆ ಈ ದಾಖಲೆಯನ್ನು ಕಡ್ಡಾಯವಾಗಿ ಹೊಂದಿರಬೇಕು! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಡಿಪ್ಲೋಮಾ, ಪದವೀಧರರೇ ಗಮನಿಸಿ : ʻಯುವನಿಧಿʼ ನೋಂದಣಿಗೆ ಈ ದಾಖಲೆಯನ್ನು ಕಡ್ಡಾಯವಾಗಿ ಹೊಂದಿರಬೇಕು!

ಬೆಂಗಳೂರು :  ಪದವೀಧರ ಹಾಗೂ ಡಿಪ್ಲೋಮಾ ಉತ್ತೀರ್ಣರಾದ ನಿರುದ್ಯೋಗಿ ಯುವಜನರಿಗೆ ಮಾಸಿಕ ನಿರುದ್ಯೋಗ ಭತ್ಯೆಯ ನೆರವು ನೀಡುವ ‘ಯುವನಿಧಿ’ ಯೋಜನೆಯ ನೋಂದಣಿ ಪ್ರಕ್ರಿಯೆ ಆರಂಭಗೊಂಡಿದೆ.

ಆರ್ಥಿಕ ಸಂಕಷ್ಟದ ನಡುವೆ ಕನಸಿನ ಉದ್ಯೋಗದ ಹುಡುಕಾಟದಲ್ಲಿರುವ ನಿರುದ್ಯೋಗಿ ಯುವಜನರು ‘ಯುವನಿಧಿ’ ಯೋಜನೆಗೆ ನೊಂದಾಯಿಸಿಕೊಳ್ಳುವ ಮೂಲಕ ಕರ್ನಾಟಕ ಸರ್ಕಾರದ ಗ್ಯಾರಂಟಿ ಯೋಜನೆಯ ಸದುಪಯೋಗಪಡೆದುಕೊಳ್ಳುವಂತೆ ಸೂಚನೆ ನೀಡಲಾಗಿದೆ.

2023 ರಲ್ಲಿ ಪದವಿ/ಡಿಪ್ಲೋಮಾ ಉತ್ತೀರ್ಣರಾಗಿ 6 ತಿಂಗಳಾದರೂ ಸರ್ಕಾರಿ/ಖಾಸಗಿ/ಸ್ವಯಂ ಉದ್ಯೋಗ ಹೊಂದಿಲ್ಲದವರು ಮತ್ತು ಉನ್ನತ ವಿದ್ಯಾಭ್ಯಾಸ ಮುಂದುವರೆಸದೆ ಇರುವ ವಿದ್ಯಾರ್ಥಿಗಳು ಕರ್ನಾಟಕ ಒನ್, ಗ್ರಾಮ ಒನ್, ಮತ್ತು ಬಾಪೂಜಿ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ http://sevasindhugs.karnataka.gov.in ಪೋರ್ಟಲ್ ಮೂಲಕ ಉಚಿತವಾಗಿ “ಯುವನಿಧಿ” ಯೋಜನೆಗೆ ಅರ್ಜಿ ಸಲ್ಲಿಸಬಹುದು.

ಪದವೀಧರರಿಗೆ ಪ್ರತಿ ತಿಂಗಳು 3,000 ರೂ.ಗಳು ಹಾಗೂ ಡಿಪ್ಲೋಮಾ ಪದವೀಧರರಿಗೆ 1500 ರೂ.ಗಳನ್ನು ನಿರುದ್ಯೋಗ ಭತ್ಯೆಯನ್ನಾಗಿ ಉದ್ಯೋಗ ಸಿಗುವವರೆಗೆ ಅಥವಾ ಗರಿಷ್ಠ 2 ವರ್ಷಗಳವರೆಗೆ ನೀಡಲಾಗುತ್ತದೆ.

ಈ ದಾಖಲೆ ಕಡ್ಡಾಯವಾಗಿ ಹೊಂದಿರಬೇಕು

ನೇರ ನಗದು ವರ್ಗಾವಣೆ (Direct Transfer) ಸ್ವೀಕರಿಸಲು ಆಧಾರ್ ಸಂಖ್ಯೆಯೊಂದಿಗೆ ಸೇರ್ಪಡೆಯಾದ (Aadhar-seeded) ಬ್ಯಾಂಕ್ ಖಾತೆಯನ್ನು ನೀವು ಹೊಂದಿರಬೇಕು.

Aadhar-linked mobile number vod ನಿಮ್ಮ ಆಧಾರ್ ಸಂಖ್ಯೆಯೊಂದಿಗೆ ಅಂಕ್ ಆಗಿರುವ ನಿಮ್ಮ ಮೊಬೈಲ್ ನಂಬರ್ ಅನ್ನು ನೀಡಬೇಕು.

ನೋಂದಾಯಿಸಿಕೊಳ್ಳಲು ಸೇವಾ ಸಿಂಧು ಪೋರ್ಟಲ್ https://sevasindhugs.karnataka.gov.in de de ಉಚಿತವಾಗಿ ಕರ್ನಾಟಕ ಒನ್, ಬೆಂಗಳೂರು ಒನ್, ಗ್ರಾಮ ಒನ್ ಮತ್ತು ಬಾಪೂಜಿ ಸೇವಾ ಕೇಂದ್ರಗಳಲ್ಲಿ ಕೂಡ ಅರ್ಜಿ ಸಲ್ಲಿಸಬಹುದು

ಸೇವಾಸಿಂಧು ಪೋರ್ಟಲ್‌ ನಲ್ಲಿ ಮಾಸಿಕವಾಗಿ ನಿರುದ್ಯೋಗ ದೃಢೀಕರಣವು ಕಡ್ಡಾಯ. ತಪ್ಪು ಮಾಹಿತಿ ನೀಡಿದ್ದಲ್ಲಿ ದಂಡ ವಿಧಿಸಲಾಗುವುದು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...