HomeKarnatakaಬಳ್ಳಾರಿ : ಜಿಲ್ಲೆಯ ಈ ಪ್ರದೇಶಗಳಲ್ಲಿ ನಾಳೆ ವಿದ್ಯುತ್ ವ್ಯತ್ಯಯ |Power Cut

ಬಳ್ಳಾರಿ : ಜಿಲ್ಲೆಯ ಈ ಪ್ರದೇಶಗಳಲ್ಲಿ ನಾಳೆ ವಿದ್ಯುತ್ ವ್ಯತ್ಯಯ |Power Cut

ಬಳ್ಳಾರಿ ಗ್ರಾಮೀಣ ಜೆಸ್ಕಾಂ ವ್ಯಾಪ್ತಿಯ ಕುಡುತಿನಿ-ಕಂಪ್ಲಿ ರಸ್ತೆಯಲ್ಲಿ ಬಿಟಿಪಿಎಸ್ನ 220ಕೆ.ವಿ ಹೊಸ ಮಾರ್ಗದ ನಿರ್ಮಾಣ ಕಾರ್ಯವನ್ನು ತುರ್ತಾಗಿ ಕೈಗೆತ್ತಿಕೊಳ್ಳುತ್ತಿರುವುದರಿಂದ 110/11ಕೆ.ವಿ ಕುಡುತಿನಿ ಉಪ-ವಿದ್ಯುತ್ ಕೇಂದ್ರದಿಂದ ವಿದ್ಯುತ್ ಸರಬರಾಜು ಆಗುವ 11ಕೆ.ವಿ ಮಾರ್ಗಗಳಲ್ಲಿ ಡಿ.30ರಂದು ಬೆಳಿಗ್ಗೆ 07 ಗಂಟೆಯಿಂದ ಸಂಜೆ 06 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಸಹಾಯಕ ಇಂಜಿನಿಯರ್ ಮೋಹನಬಾಬು ಅವರು ತಿಳಿಸಿದ್ದಾರೆ.

ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು

ಫೀಡರ್-6ರ ಕೆಐಎಡಿಬಿ 1ನೇ ಮಾರ್ಗ ವ್ಯಾಪ್ತಿಯ ಏಳುಬೆಂಚಿ, ಸಿದ್ದಮ್ಮನಹಳ್ಳಿ, ಯರ್ರಂಗಳಿ, ಬಸವಣ್ಣ ಕ್ಯಾಂಪ್, ಭೂಲಕ್ಷ್ಮಿ ಕ್ಯಾಂಪ್ ಮುಂತಾದ ಐ.ಪಿ ಸೆಟ್ಗಳು. ಫೀಡರ್-2ರ ತಿಮ್ಮಲಾಪುರ (ಏಳುಬೆಂಚಿ) ಎನ್.ಜೆ.ವೈ ಮಾರ್ಗದ ತಿಮ್ಮಲಾಪುರ, ಏಳುಬೆಂಚಿ ಹಾಗೂ ಬಸವಣ್ಣ ಕ್ಯಾಂಪ್ಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಸಾರ್ವಜನಿಕರು ಹಾಗೂ ವಿದ್ಯುತ್ ಗ್ರಾಹಕರು ಸಹಕರಿಸಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular