ನವದೆಹಲಿ : ಜೆಡಿಯು (JDU) ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ಬಿಹಾರದ ಸಿಎಂ ನಿತೀಶ್ ಕುಮಾರ್ ನೇಮಕಗೊಂಡಿದ್ದಾರೆ.
ಜೆಡಿಯು ಅಧ್ಯಕ್ಷ ಸ್ಥಾನಕ್ಕೆ ರಾಜೀವ್ ರಂಜನ್ ಸಿಂಗ್ ಅಲಿಯಾಸ್ ಲಾಲನ್ ಸಿಂಗ್ ರಾಜೀನಾಮೆ ನೀಡಿದ ಬೆನ್ನಲ್ಲೇ ಜೆಡಿಯು ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ನಿತೀಶ್ ಕುಮಾರ್ ನೇಮಕಗೊಂಡಿದ್ದಾರೆ ಎಂದಿ ತಿಳಿದು ಬಂದಿದೆ.
ಡಿಸೆಂಬರ್ 29 ರಂದು ದೆಹಲಿಯಲ್ಲಿ ನಡೆಯಲಿರುವ ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಪಾಟ್ನಾದಲ್ಲಿ ಇತ್ತೀಚೆಗೆ ನಡೆದ ಸಭೆಯ ನಂತರ ಲಾಲನ್ ಸಿಂಗ್ ಅಧಿಕಾರದಿಂದ ಕೆಳಗಿಳಿದ್ದರು.