HomeKarnatakaBIG NEWS: ಮೆಟ್ರೋ ಪ್ರಯಾಣಿಕರ ಗಮನಕ್ಕೆ; ಟಿಕೆಟ್ ಮುಂಚಿತವಾಗಿ ಪಡೆಯಲು ಸೂಚನೆ

BIG NEWS: ಮೆಟ್ರೋ ಪ್ರಯಾಣಿಕರ ಗಮನಕ್ಕೆ; ಟಿಕೆಟ್ ಮುಂಚಿತವಾಗಿ ಪಡೆಯಲು ಸೂಚನೆ

ಬೆಂಗಳೂರು: ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ನಮ್ಮ ಮೆಟ್ರೋ ಸಂಚಾರ ವಿಸ್ತರಿಸಲಾಗಿದ್ದು, ಡಿಸೆಂಬರ್ 31ರ ರಾತ್ರಿ 11 ಗಂಟೆಯಿಂದ ಬೆಳಿಗ್ಗೆ 2 ಗಂಟೆಯವರೆಗೆ ಮೆಟ್ರೋ ಸಂಚರಿಸಲಿದೆ.

ಆದರೆ ಎಂ.ಜಿ.ಪಸ್ತೆ ಮೆಟ್ರೋ ನಿಲ್ದಾಣದಲ್ಲಿ ಪ್ರವೇಶ ನಿರ್ಬಂಧಿಸಲಾಗಿದೆ. ಟ್ರಿನಿಟಿ ಅಥವಾ ಕಬ್ಬನ್ ಪಾರ್ಕ್ ಮೆಟ್ರೋ ನಿಲ್ದಾಣಗಳ ಮೂಲಕ ತೆರಳಬಹುದಾಗಿದೆ. ಟ್ರಿನಿಟಿ ಅಥವಾ ಕಬ್ಬನ್ ಪಾರ್ಕ್ ಮೆಟ್ರೋ ನಿಲ್ದಾಣದಿಂದ ಒಬ್ಬರಿಗೆ 50 ರೂಪಾಯಿ ಪೇಪರ್ ಟಿಕೆಟ್ ನಿಡಲಾಗುತ್ತದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇನ್ನು ಡಿಸೆಂಬರ್ 31ರ ರಾತ್ರಿ ಮೆಟ್ರೋ ಟಿಕೆಟ್ ವಿತರಣೆ ಇರುವುದಿಲ್ಲ. ಹಾಗಾಗಿ ಪ್ರಯಾಣಿಕರು ಪೇಪರ್ ಟಿಕೆಟ್ ನ್ನು ಮುಂಚಿತವಾಗಿ ಪಡೆದುಕೊಳ್ಳಬೇಕು. ಸ್ಮಾರ್ಟ್ ಕಾರ್ಡ್ ಅಥವಾ ಕ್ಯೂ ಆರ್ ಕೋಡ್ ಹೊಂದಿರುವ ಪ್ರಯಾಣಿಕರು ಎಂದಿನಂತೆ ರಿಯಾಯಿತಿ ದರದಲ್ಲಿ ಪ್ರಯಾಣಿಸಬಹುದು ಎಂದು ಬಿಎಂಆರ್ ಸಿ ಎಲ್ ತಿಳಿಸಿದೆ.

 

For Latest News Updates, Join Our Whatsapp Community🚩
RELATED ARTICLES

Most Popular