‘ಎಡಗೈಯೇ ಅಪಘಾತಕ್ಕೆ ಕಾರಣ’ ಎಂಬ ವಿಭಿನ್ನ ಟೈಟಲ್ ಹಾಗೂ ಪೋಸ್ಟರ್ ಮೂಲಕವೇ ಗಮನ ಸೆಳೆಯುತ್ತಿರುವ ಚಿತ್ರದ ಟೀಸರ್ ಬಿಡುಗಡೆಯಾಗಿದೆ.
‘ಎಡಗೈಯೇ ಅಪಘಾತಕ್ಕೆ ಕಾರಣ’ ಚಿತ್ರದಲ್ಲಿ ನಟ ಧೂದ್ ಪೇಡ ದಿಗಂತ ಕಾಣಿಸಿಕೊಂಡಿದ್ದು, ನಟ ಕಿಚ್ಚ ಸುದೀಪ್ ಚಿತ್ರದ ಟ್ರೇಲರ್ ರಿಲೀಸ್ ಮಾಡಿ ಶುಭ ಹಾರೈಸಿದ್ದಾರೆ.
ಚಿತ್ರದಲ್ಲಿ ದೂದ್ ಪೇಡ ದಿಗಂತ್ ನಾಯಕನಾಗಿ ನಟಿಸಿದ್ದು, ಯುವನಟಿ ಧನು ಹರ್ಷ ನಾಯಕಿಯಾಗಿ ಅಭಿನಯಿಸಿದ್ದಾರೆ. ನಿಧಿ ಸುಬ್ಬಯ್ಯ, ರಾಧಿಕಾ ನಾರಾಯಣ್, ಭಜರಂಗಿ ಲೋಕಿ, ಕೃಷ್ಣ ಹೆಬ್ಬಾಳ್, ನಿರೂಪ್ ಭಂಡಾರಿ ಮತ್ತಿತರರು ತೆರೆ ಹಂಚಿಕೊಂಡಿದ್ದಾರೆ. ಸಿನಿಮಾವನ್ನು ಹೈಫನ್ ಪಿಕ್ಚರ್ಸ್ ಹಾಗೂ ಗುರುದತ್ ಗಾಣಿಗ ಫಿಲ್ಮಂಸ್ ಬ್ಯಾನರ್ ನಡಿ ನಿರ್ಮಾಣ ಮಾಡುತ್ತಿದ್ದಾರೆ. ಚಿತ್ರದ ಬಗ್ಗೆ ಸಿನಿರಸಿಕರಲ್ಲಿ ಸಿಕ್ಕಾಪಟ್ಟೆ ನಿರೀಕ್ಷೆ ಮೂಡಿದೆ.