ಬೆಂಗಳೂರು : ಡಿಸೆಂಬರ್ 30 ರ ಇಂದು ಸಹಕಾರ ಇಲಾಖೆಯ ಸಹಕಾರ ಸಂಘಗಳ ನಿಬಂಧಕರ ಕಚೇರಿಯಲ್ಲಿನ ಸಹಕಾರ ಸಂಘಗಳ ನಿರೀಕ್ಷಕರು, ಕಲ್ಯಾಣ ಕರ್ನಾಟಕ ವೃಂದ ಹುದ್ದೆಗಳ ನೇಮಕಾತಿ ಪರೀಕ್ಷೆ ನಡೆಯಲಿದೆ.
ಪರೀಕ್ಷೆಗಳನ್ನು ಸುಸೂತ್ರವಾಗಿ ಮತ್ತು ದೋಷರಹಿತವಾಗಿ ನಡೆಸಲು ಅನುಕೂಲವಾಗುವಂತೆ ಬೆಳಿಗ್ಗೆ 10 ಗಂಟೆಯಿಂದ ಸಂಜೆ 04 ಗಂಟೆಯವರೆಗೂ ಪರೀಕ್ಷಾ ಕೇಂದ್ರದ ಸುತ್ತಲೂ 200 ಮೀಟರ್‌ಗಳ ವ್ಯಾಪ್ತಿಯಲ್ಲಿ ಸಿ.ಆರ್.ಪಿ.ಸಿ 1973 ರ ಕಲಂ 144ನೇ ಕಲಂ ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ ಹೊರಡಿಸಲಾಗಿದೆ.
ಕಲ್ಯಾಣ ಕರ್ನಾಟಕದ ಏಳು ಜಿಲ್ಲೆಗಳಲ್ಲಿ ಇಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 04 ಗಂಟೆಯವರೆಗೆ ಪರೀಕ್ಷೆಗಳು ನಡೆಯಲಿವೆ. ಆದೇಶದನ್ವಯ ಪರೀಕ್ಷಾ ಮೌಲ್ಯಮಾಪನ ಕೇಂದ್ರದ ಸುತ್ತಲೂ 200 ಮೀಟರ್ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಎಸ್.ಟಿ.ಡಿ. ಮೊಬೈಲ್, ಪೇಜರ್, ಜರಾಕ್ಸ್, ಟೈಪಿಂಗ್ ಮುಂತಾದವುಗಳನ್ನು ನಿಷೇಧಿಸಲಾಗಿದೆ.
ಧಾರ್ಮಿಕ ಆಚರಣೆಗೆ ಸಂಬಂಧಿಸಿದ ವಸ್ತ್ರಗಳನ್ನು ಧರಿಸುವ ಅಭ್ಯರ್ಥಿಗಳು ಹಾಗೂ ಶ್ರವಣ ಸಾಧನ ಧರಿಸುವ ಅಭ್ಯರ್ಥಿಗಳು ಎರಡು ತಾಸು ಮೊದಲೇ ಪರೀಕ್ಷಾ ಕೇಂದ್ರಕ್ಕೆ ಅಗಮಿಸಿ ತಪಾಸಣೆಗೆ ಒಳಪಡಬೇಕು. ತಾಳಿ ಕಾಲುಂಗರ ಹೊರತುಪಡಿಸಿ ಬೇರಾವುದೇ ಆಭರಣ ಧರಿಸುವಂತಿಲ್ಲ. ಸರಳ ಉಡುಪು, ಚಪ್ಪಲಿಯಲ್ಲಿ ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಬೇಕು. ಮೊಬೈಲ್, ಬ್ಲೂಟೂತ್ ಸೇರಿ ಎಲ್ಲಾ ಎಲೆಕ್ಟ್ರಾನಿಕ್ ಸಾಧನಗಳನ್ನು ನಿಷೇಧಿಸಲಾಗಿದೆ.