ಪ್ರಧಾನಿ ನರೇಂದ್ರ ಮೋದಿ ಅವರು ಅಯೋಧ್ಯೆಗೆ ತೆರಳಿದ್ದು, ಕೆಲವೇ ಕ್ಷಣಗಳಲ್ಲಿ ಮೆಗಾ ರೋಡ್ ಶೋ ನಡೆಸಲಿದ್ದಾರೆ. ಹೌದು, ರಾಮನ ನಾಡಲ್ಲಿ ಪ್ರಧಾನಿ ಮೋದಿ ಬರೋಬ್ಬರಿ 15 ಕಿಮೀ ಮೆಗಾ ರೋಡ್ ಶೋ ನಡೆಸಲಿದ್ದಾರೆ.
ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಪ್ರಧಾನಿ ಮೋದಿಗೆ ಸ್ವಾಗತ ಕೋರಿದರು. ಅಯೋಧ್ಯೆಯಲ್ಲಿ ಮೋದಿ ಇಂದುಸುಮಾರು 15,000 ಕೋಟಿ ರೂ.ಗಳ ವಿವಿಧ ಯೋಜನೆಗಳನ್ನು ಉದ್ಘಾಟಿಸಲಿದ್ದಾರೆ.ದರ್ಭಂಗಾ-ಅಯೋಧ್ಯೆ-ಆನಂದ್ ವಿಹಾರ್ ಟರ್ಮಿನಲ್ ಅಮೃತ್ ಭಾರತ್ ಎಕ್ಸ್ ಪ್ರೆಸ್ ಮತ್ತು ಮಾಲ್ಡಾ ಟೌನ್-ಸರ್ ಎಂ.ವಿಶ್ವೇಶ್ವರಯ್ಯ ಟರ್ಮಿನಸ್ (ಬೆಂಗಳೂರು) ಅಮೃತ್ ಭಾರತ್ ಎಕ್ಸ್ ಪ್ರೆಸ್ ಎಂಬ ಎರಡು ಅಮೃತ್ ಭಾರತ್ ರೈಲುಗಳನ್ನು ಪ್ರಧಾನಮಂತ್ರಿ ಉದ್ಘಾಟಿಸಲಿದ್ದಾರೆ. ಹೆಚ್ಚುವರಿಯಾಗಿ, ಆರು ಹೊಸ ವಂದೇ ಭಾರತ್ ರೈಲುಗಳಿಗೆ ಹಸಿರು ನಿಶಾನೆ ತೋರಿಸಲಿದ್ದಾರೆ.
ಪ್ರಧಾನಿ ರಾಜ್ಯದಲ್ಲಿ 15,700 ಕೋಟಿ ರೂ.ಗಿಂತ ಹೆಚ್ಚು ಮೌಲ್ಯದ ಹಲವಾರು ಅಭಿವೃದ್ಧಿ ಯೋಜನೆಗಳನ್ನು ಸಮರ್ಪಿಸಲಿದ್ದಾರೆ,ಇವುಗಳಲ್ಲಿ ಅಯೋಧ್ಯೆ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳ ಅಭಿವೃದ್ಧಿಗೆ ಸುಮಾರು 11,100 ಕೋಟಿ ರೂ.ಗಳ ಯೋಜನೆಗಳು ಮತ್ತು ಉತ್ತರ ಪ್ರದೇಶದಾದ್ಯಂತ ಇತರ ಯೋಜನೆಗಳಿಗೆ ಸಂಬಂಧಿಸಿದ ಸುಮಾರು 4600 ಕೋಟಿ ರೂ.ಗಳ ಯೋಜನೆಗಳು ಸೇರಿವೆ.