HomeKarnatakaBIG NEWS: ಪಡಿತರ ಅಕ್ಕಿ ಕಳ್ಳತನ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್; ಬಿಜೆಪಿ ಮುಖಂಡನ ಸಹೋದರನ ರೈಸ್...

BIG NEWS: ಪಡಿತರ ಅಕ್ಕಿ ಕಳ್ಳತನ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್; ಬಿಜೆಪಿ ಮುಖಂಡನ ಸಹೋದರನ ರೈಸ್ ಮಿಲ್ ನಿಂದ 700 ಕ್ವಿಂಟಾಲ್ ವಶಕ್ಕೆ

ಯಾದಗಿರಿ: ಯಾದಗಿರಿ ಜಿಲ್ಲೆಯಲ್ಲಿ ಪಡಿತರ ಅಕ್ಕಿ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಬಿಜೆಪಿ ಮುಖಂಡ ಮಣಿಕಂಠ ರಠೋಡ್ ಸಹೋದರನ ರೈಸ್ ಮಿಲ್ ನಿಂದ 700 ಕ್ವಿಂಟಾಲ್ ಅಕ್ಕಿ ವಶಕ್ಕೆ ಪಡೆಯಲಾಗಿದೆ.

ಮಣಿಕಂಠ ರಾಠೋಡ್ ಸಹೋದರ ರಾಜು ರಾಠೋಡ್ ಗೆ ಸೇರಿದ ಲಕ್ಷ್ಮೀ ವೆಂಕಟೇಶ್ವರ ರೈಸ್ ಮಿಲ್ ನಿಂದ ಅಕ್ಕಿ ವಶಕ್ಕೆ ಪಡೆಯಲಾಗಿದೆ. ಸುರಪುರ ಡಿವೈ ಎಸ್ ಪಿ ಜಾವೇದ್ ಇನಾಮ್ದಾರ್ ನೇತೃತ್ವದಲ್ಲಿ ಈ ದಾಳಿ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ದಾಳಿ ವೇಳೆ ಪಾಲಿಶ್ ಮಾಡಿದ್ದ 630 ಕ್ವಿಂಟಾಲ್ ಪಡಿತರ ಅಕ್ಕಿ ಸೇರಿ ಒಟ್ಟು 700 ಕ್ವಿಂಟಾಲ್ ಅಕ್ಕಿ ವಶಕ್ಕೆ ಪಡೆಯಲಾಗಿದೆ.

ಪಡಿತರ ಅಕ್ಕಿ ಕಳ್ಳತನದಲ್ಲಿ ಬಂಧಿತರಾಗಿದ್ದ ಆರೋಪಿಗಳು ತಾವು ಕದ್ದ ಅಕ್ಕಿಅನ್ನು ರಾಜು ರಾಠೋಡ್ ಗೆ ಮಾರಿದ್ದಾಗಿ ಬಾಯ್ಬಿಟ್ಟಿದ್ದರು. ಈ ಹಿನ್ನೆಲೆಯಲ್ಲಿ ದಾಳಿ ನಡೆದಿದೆ.

For Latest News Updates, Join Our Whatsapp Community🚩
RELATED ARTICLES

Most Popular