ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ದೇಶಾದ್ಯಂತ ವಿವಿಧ ಮಾರ್ಗಗಳನ್ನು ಸಂಪರ್ಕಿಸುವ ಎರಡು ಅಮೃತ್ ಭಾರತ್ ಎಕ್ಸ್ಪ್ರೆಸ್ ರೈಲುಗಳು ಮತ್ತು ಆರು ವಂದೇ ಭಾರತ್ ಎಕ್ಸ್ಪ್ರೆಸ್ ರೈಲುಗಳಿಗೆ ಹಸಿರು ನಿಶಾನೆ ತೋರಿದರು.
ದರ್ಭಂಗಾ-ಅಯೋಧ್ಯೆ-ಆನಂದ್ ವಿಹಾರ್ ಟರ್ಮಿನಲ್ ಅಮೃತ್ ಭಾರತ್ ಎಕ್ಸ್ ಪ್ರೆಸ್ ಮತ್ತು ಮಾಲ್ಡಾ ಟೌನ್-ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಸ್ (ಬೆಂಗಳೂರು) ಅಮೃತ್ ಭಾರತ್ ಎಕ್ಸ್ ಪ್ರೆಸ್ ಗೆ ಅವರು ಹಸಿರು ನಿಶಾನೆ ತೋರಿದರು.
ಪ್ರಧಾನಿ ಮೋದಿ ಆರು ಹೊಸ ವಂದೇ ಭಾರತ್ ರೈಲುಗಳಿಗೆ ಹಸಿರು ನಿಶಾನೆ ತೋರಿದ್ದು, ಇವುಗಳಲ್ಲಿ ಶ್ರೀ ಮಾತಾ ವೈಷ್ಣೋ ದೇವಿ ಕತ್ರಾ-ನವದೆಹಲಿ ವಂದೇ ಭಾರತ್ ಎಕ್ಸ್ಪ್ರೆಸ್ ಸೇರಿವೆ. ಅಮೃತಸರ-ದೆಹಲಿ ವಂದೇ ಭಾರತ್ ಎಕ್ಸ್ಪ್ರೆಸ್; ಕೊಯಮತ್ತೂರು-ಬೆಂಗಳೂರು ಕಂಟೋನ್ಮೆಂಟ್ ವಂದೇ ಭಾರತ್ ಎಕ್ಸ್ಪ್ರೆಸ್; ಮಂಗಳೂರು-ಮಡಗಾಂವ್ ವಂದೇ ಭಾರತ್ ಎಕ್ಸ್ಪ್ರೆಸ್; ಜಲ್ನಾ-ಮುಂಬೈ ವಂದೇ ಭಾರತ್ ಎಕ್ಸ್ಪ್ರೆಸ್ ಮತ್ತು ಅಯೋಧ್ಯೆ-ಆನಂದ್ ವಿಹಾರ್ ಟರ್ಮಿನಲ್ ವಂದೇ ಭಾರತ್ ಎಕ್ಸ್ಪ್ರೆಸ್.
ಇದಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಅಯೋಧ್ಯೆ ಧಾಮ್ ರೈಲ್ವೆ ನಿಲ್ದಾಣವನ್ನು ಉದ್ಘಾಟಿಸಿದರು.ಉದ್ಘಾಟನಾ ಸಮಾರಂಭದಲ್ಲಿ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಮತ್ತು ರಾಜ್ಯಪಾಲ ಆನಂದಿಬೆನ್ ಪಟೇಲ್ ಉಪಸ್ಥಿತರಿದ್ದರು.
https://twitter.com/ANI/status/1740987579540124115?ref_src=twsrc%5Etfw%7Ctwcamp%5Etweetembed%7Ctwterm%5E1740987579540124115%7Ctwgr%5E8c20f796baca2531aa88a6ccee58e7006dcc4b23%7Ctwcon%5Es1_&ref_url=https%3A%2F%2Fwww.livemint.com%2Fnews%2Findia%2Fpm-modi-ayodhya-visit-live-updates-railway-station-airport-inaugurate-projects-amrit-bharat-train-ram-mandir-temple-city-11703897582541.html