ಉತ್ತರ ಪ್ರದೇಶ : ಅಯೋಧ್ಯೆಯಲ್ಲಿರುವ ಪ್ರಧಾನಿ ಮೋದಿ ಇಂದು ‘ಮಹರ್ಷಿ ವಾಲ್ಮೀಕಿ ವಿಮಾನ ನಿಲ್ದಾಣ’ ವನ್ನು ಉದ್ಘಾಟಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ಅಯೋಧ್ಯೆಯ ಲತಾ ಮಂಗೇಶ್ಕರ್ ಚೌಕ್ ಗೆ ಭೇಟಿ ನಂತರ ಅವರು ಮಹರ್ಷಿ ವಾಲ್ಮೀಕಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಉದ್ಘಾಟಿಸಿದ್ದಾರೆ.ಕೇಂದ್ರ ಸಚಿವರಾದ ವಿ.ಕೆ.ಸಿಂಗ್, ಜ್ಯೋತಿರಾದಿತ್ಯ ಸಿಂಧಿಯಾ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಇದಕ್ಕೂ ಮುನ್ನ ಪ್ರಧಾನಿ ಮೋದಿ ಅವರು ದೇವಾಲಯ ಪಟ್ಟಣದಲ್ಲಿ ರೋಡ್ ಶೋ ನಡೆಸಿ ಅಯೋಧ್ಯೆ ಧಾಮ್ ರೈಲ್ವೆ ನಿಲ್ದಾಣವನ್ನು ಉದ್ಘಾಟಿಸಿದರು ಮತ್ತು ಎರಡು ಅಮೃತ್ ಭಾರತ್ ರೈಲುಗಳು ಮತ್ತು ಆರು ವಂದೇ ಭಾರತ್ ರೈಲುಗಳಿಗೆ ಹಸಿರು ನಿಶಾನೆ ತೋರಿದರು.
ಇದಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ದೇಶಾದ್ಯಂತ ವಿವಿಧ ಮಾರ್ಗಗಳನ್ನು ಸಂಪರ್ಕಿಸುವ ಎರಡು ಅಮೃತ್ ಭಾರತ್ ಎಕ್ಸ್ಪ್ರೆಸ್ ರೈಲುಗಳು ಮತ್ತು ಆರು ವಂದೇ ಭಾರತ್ ಎಕ್ಸ್ಪ್ರೆಸ್ ರೈಲುಗಳಿಗೆ ಹಸಿರು ನಿಶಾನೆ ತೋರಿದರು.ದರ್ಭಂಗಾ-ಅಯೋಧ್ಯೆ-ಆನಂದ್ ವಿಹಾರ್ ಟರ್ಮಿನಲ್ ಅಮೃತ್ ಭಾರತ್ ಎಕ್ಸ್ ಪ್ರೆಸ್ ಮತ್ತು ಮಾಲ್ಡಾ ಟೌನ್-ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಸ್ (ಬೆಂಗಳೂರು) ಅಮೃತ್ ಭಾರತ್ ಎಕ್ಸ್ ಪ್ರೆಸ್ ಗೆ ಅವರು ಹಸಿರು ನಿಶಾನೆ ತೋರಿದರು.