ಉತ್ತರ ಪ್ರದೇಶ : ಜ. 14 ರಿಂದ ದೇಶಾದ್ಯಂತ ಯಾತ್ರಾ ಸ್ಥಳಗಳಲ್ಲಿ ಸ್ವಚ್ಛತಾ ಅಭಿಯಾನ ಆರಂಭಿಸಿ ಎಂದು ಪ್ರಧಾನಿ ಮೋದಿ ಕರೆ ನೀಡಿದ್ದಾರೆ.
ಅಯೋಧ್ಯೆ ಧಾಮ್ ರೈಲ್ವೆ ನಿಲ್ದಾಣ ಮತ್ತು ಮಹರ್ಷಿ ವಾಲ್ಮೀಕಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಪ್ರಧಾನಿ ಉದ್ಘಾಟಿಸಿದ ನಂತರ ಮತ್ತು ಎಂಟು ಹೊಸ ರೈಲು ಮಾರ್ಗಗಳಿಗೆ ಹಸಿರು ನಿಶಾನೆ ತೋರಿದ ನಂತರ ಅವರು ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದರು. ಜನವರಿ 14 ರಿಂದ ದೇಶಾದ್ಯಂತ ಯಾತ್ರಾ ಸ್ಥಳಗಳಲ್ಲಿ ಸ್ವಚ್ಛತಾ ಅಭಿಯಾನವನ್ನು ಪ್ರಾರಂಭಿಸುವಂತೆ ಪ್ರಧಾನಿ ಮೋದಿ ಜನರಿಗೆ ಮನವಿ ಮಾಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಅಯೋಧ್ಯೆಯಲ್ಲಿ ಮಹರ್ಷಿ ವಾಲ್ಮೀಕಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ, ರೈಲ್ವೇ ನಿಲ್ದಾಣ ಹಾಗೂ 8 ಹೊಸ ರೈಲುಗಳಿಗೆ ಚಾಲನೆ ನೀಡಿದರು. ಇದಕ್ಕೂ ಮುನ್ನ ಪ್ರಧಾನಿ ಮೋದಿ ಮೆಗಾ ರೋಡ್ ಶೋ ನಡೆಸಿದರು.
ಕೇಂದ್ರ ಸಚಿವರಾದ ವಿ.ಕೆ.ಸಿಂಗ್, ಜ್ಯೋತಿರಾದಿತ್ಯ ಸಿಂಧಿಯಾ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.