ಬೆಂಗಳೂರು : ವಿದ್ಯಾರ್ಥಿ ವೇತನದ ನಿರೀಕ್ಷೆಯಲ್ಲಿರುವ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ.
ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಕೇಂದ್ರ ಸರ್ಕಾರ ವಿದ್ಯಾರ್ಥಿವೇತನ ಸ್ಥಗಿತಗೊಳಿಸಿರುವ ಕಾರಣ ರಾಜ್ಯ ಸರ್ಕಾರವೇ ಈ ಮೊತ್ತವನ್ನು ಭರಿಸಲು ತೀರ್ಮಾನಿಸಿದೆ. 6.4 ಲಕ್ಷ ವಿದ್ಯಾರ್ಥಿಗಳಿಗೆ ಹಣ ಬಿಡುಗಡೆಗೆ ತಯಾರಾಗಿದ್ದು, ಈ ಉದ್ದೇಶಕ್ಕೆ ಬಜೆಟ್ನಲ್ಲಿ 60 ಕೋಟಿ ರೂ. ನಿಗದಿಯಾಗಿದೆ. ಉಳಿದ 40 ಕೋಟಿ ರೂ. ಹೆಚ್ಚುವರಿ ಮೊತ್ತವನ್ನು ಇಲಾಖೆಗೆ ಲಭ್ಯವಿರುವ ಅನುದಾನದಲ್ಲಿಯೇ ಮರುಹಂಚಿಕೆ ಮಾಡಬೇಕು ಎಂದು ಅಲ್ಪಸಂಖ್ಯಾತರ ಅಭಿವೃದ್ಧಿ ಹಾಗೂ ವಸತಿ ಇಲಾಖೆಗಳ ಕಾಮಗಾರಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿರ್ದೇಶನ ನೀಡಿದ್ದಾರೆ.