HomeKarnatakaವಾಹನ ಸವಾರರ ಗಮನಕ್ಕೆ : 'ಹೊಸ ವರ್ಷಾಚರಣೆ' ಹಿನ್ನೆಲೆ ಬೆಂಗಳೂರಿನ ಈ ರಸ್ತೆಗಳಲ್ಲಿ ಇಂದು ಸಂಚಾರ...

ವಾಹನ ಸವಾರರ ಗಮನಕ್ಕೆ : ‘ಹೊಸ ವರ್ಷಾಚರಣೆ’ ಹಿನ್ನೆಲೆ ಬೆಂಗಳೂರಿನ ಈ ರಸ್ತೆಗಳಲ್ಲಿ ಇಂದು ಸಂಚಾರ ನಿಷೇಧ

ಬೆಂಗಳೂರು : ಇಂದು ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆಯ ಸಂಭ್ರಮ ಮನೆ ಮಾಡಿದೆ. ಹೊಸ ವರ್ಷ 2024 ನ್ನು ವೆಲ್ ಕಮ್ ಮಾಡಲು ಬೆಂಗಳೂರಿಗರು ಸಿದ್ದತೆ ನಡೆಸಿದ್ದಾರೆ. ಈ ಹಿನ್ನೆಲೆ ಬೆಂಗಳೂರಿನಲ್ಲಿ ಇಂದು ಟ್ರಾಫಿಕ್ ಜಾಮ್ ಆಗುವ ಸಾಧ್ಯತೆಯಿದ್ದು, ಸಂಚಾರಿ ಪೊಲೀಸರು ಕೆಲವು ರಸ್ತೆಗಳಲ್ಲಿ ವಾಹನ ಸಂಚಾರ ನಿರ್ಬಂಧಿಸಿದ್ದಾರೆ.

ಈ ರಸ್ತೆಗಳಲ್ಲಿ ಸಂಚಾರ ನಿಷೇಧ, ಪರ್ಯಾಯ ಮಾರ್ಗ

1) ಎಂ.ಜಿ.ರಸ್ತೆ ಅನಿಲ್ ಕುಂಬ್ಳೆ ವೃತ್ತದಿಂದ ಮೆಯೋ ಹಾಲ್ ಜಂಕ್ಷನ್ ವರೆಗೆ
2)ಚರ್ಚ್ ಸ್ಟ್ರೀಟ್ರಲ್ಲಿ, ಬ್ರಿಗೇಡ್ ರಸ್ತೆ ಜಂಕ್ಷನ್ ನಿಂದ ಮ್ಯೂಸಿಯಂ ರಸ್ತೆ ಜಂಕ್ಷನ್ ವರೆಗೆ
3) ರೆಸ್ಟ್ ಹೌಸ್ ರಸ್ತೆಯಲ್ಲಿ ಮ್ಯೂಸಿಯಂ ರಸ್ತೆ ಜಂಕ್ಷನ್ ನಿಂದ ಬ್ರಿಗೇಡ್ ರಸ್ತೆ ಜಂಕ್ಷನ್ ವರೆಗೆ
4)ರೆಸಿಡೆನ್ಸಿ ಕ್ರಾಸ್ ರಸ್ತೆಯಲ್ಲಿ ರೆಸಿಡೆನ್ಸಿ ರಸ್ತೆ ಜಂಕ್ಷನ್ ನಿಂದ ಎಂ.ಜಿ ರಸ್ತೆ ಜಂಕ್ಷನ್ ವರೆಗೆ
5)ರೆಸಿಡೆನ್ಸಿ ರಸ್ತೆಯ ಆಶಿರ್ವಾದಂ ಜಂಕ್ಷನ್ನಿಂದ ಮೆಯೋ ಹಾಲ್ ಜಂಕ್ಷನ್ ವರೆಗೆ
6) ಬ್ರಿಗೇಡ್ ರಸ್ತೆಯಲ್ಲಿ, ಕಾವೇರಿ ಎಂಪೋರಿಯಂ ಜಂಕ್ಷನ್ ನಿಂದ ಅಪೇರಾ ಜಂಕ್ಷನ್ವರೆಗೆ

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಎಂ.ಜಿ ರಸ್ತೆಯಲ್ಲಿ, ಕ್ವೀನ್ಸ್ ವೃತ್ತದ ಕಡೆಯಿಂದ ಹಲಸೂರು ಕಡೆ ಹೋಗುವವರು ಹಾಗೂ ಮುಂದೆ ಹೋಗುವವರು ಅನಿಲ್ ಕುಂಬ್ಳೆ ವೃತ್ತದಲ್ಲಿ ಎಡ ತಿರುವು ತೆಗೆದುಕೊಂಡು ಸೆಂಟ್ರಲ್ ಸ್ಟ್ರೀಟ್-ಬಿ.ಆರ್.ವಿ ಜಂಕ್ಷನ್-ಬಲ ತಿರುವು ಕಬ್ಬನ್ರಸ್ತೆ ಮೂಲಕ ಸಂಚರಿಸಿ ವೆಬ್ಜಂಕ್ಷನ್ ಬಳಿ ಎಂ.ಜಿ ರಸ್ತೆಯನ್ನು ಸೇರಿ ಮುಂದೆ ಸಾಗಬಹುದಾಗಿದೆ.
ಹಲಸೂರು ಕಡೆಯಿಂದ ಕಂಟೊನ್ವೆಂಟ್ ಕಡೆ ಹೋಗುವವರು ಟ್ರಿನಿಟಿ ವೃತ್ತದಲ್ಲಿ ಬಲ ತಿರುವು ತೆಗೆದುಕೊಂಡು ಹಲಸೂರು ರಸ್ತೆ-ಡಿಕನ್ಸನ್ ರಸ್ತೆ ಮಾರ್ಗವಾಗಿ ಸಂಚರಿಸಿ ಕಬ್ಬನ್ ರಸ್ತೆಗೆ ಹೋಗಬಹುದಾಗಿದೆ.

ಹಲಸೂರು ಕಡೆಯಿಂದ ಮೆಜೆಸ್ಟಿಕ್ ಕಡೆಗೆ ಹೋಗುವವವರು ವಾಹನಗಳು ಮೆಯೋಹಾಲ್ ಜಂಕ್ಷನ್ನಲ್ಲಿ ಎಡ ತಿರುವು ಪಡೆದು ಕಮೀಷನರೇಟ್ ರಸ್ತೆಯ ಮೂಲಕ ಗರುಡ ಮಾಲ್ ಜಂಕ್ಷನ್, ಡಿಸೋಜಾ ಜಂಕ್ಷನ್ನಲ್ಲಿ ಬಲ ತಿರುವು ಪಡೆದು ರಿಚ್ಮಂಡ್ ರಸ್ತೆಯ ಮೂಲಕ ತೆರಳಬಹುದಾಗಿದೆ.

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular