ಶಿವಮೊಗ್ಗ: ಶಿವಮೊಗ್ಗ ತಾಲೂಕಿನ ನಿಧಿಗೆ ಸಮೀಪದ ಮಲ್ನಾಡ್ ಕ್ಯಾನ್ಸರ್ ಆಸ್ಪತ್ರೆ ಬಳಿ ಹೆದ್ದಾರಿಯಲ್ಲಿ ಬಂದೂಕಿನಿಂದ ಆಕಾಶದ ಕಡೆಗೆ ಗುಂಡು ಹಾರಿಸಿದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
ಚಿಕ್ಕಮಗಳೂರಿನ ಸಿರಗನಹಳ್ಳಿಯ ಹರ್ಷ ಪಟೇಲ್(23), ಅಜ್ಜಂಪುರದ ಅಭಿಷೇಕ್(23) ಎಂಬುವರನ್ನು ಬಂಧಿಸಲಾಗಿದ್ದು, ಒಂದು ಏರ್ ಗನ್, ಕಾರ್ ವಶಕ್ಕೆ ಪಡೆಯಲಾಗಿದೆ. ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದ ವಿಡಿಯೋ ಆಧರಿಸಿ ತುಂಗಾ ನಗರ ಠಾಣೆ ಪೋಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ. ಪಿಎಸ್ಐ ರಘುವೀರ್ ಹಾಗೂ ಸಿಬ್ಬಂದಿ ಶನಿವಾರ ಇಬ್ಬರನ್ನು ಬಂಧಿಸಿದ್ದಾರೆ.