ಬೆಂಗಳೂರಿಗರಿಗೆ ಗುಡ್ ನ್ಯೂಸ್ : ಇಂದು ರಾತ್ರಿ 2 ಗಂಟೆಯವರೆಗೂ ಸಂಚರಿಸುತ್ತೆ ‘ನಮ್ಮ ಮೆಟ್ರೋ’ |Year end

ಬೆಂಗಳೂರು: ಹೊಸ ವರ್ಷಾಚರಣೆಗೆ ಬೆಂಗಳೂರಿಗರಿಗೆ ಗುಡ್ ನ್ಯೂಸ್…. ಪ್ರಯಾಣಿಕರ ಅನುಕೂಲಕ್ಕಾಗಿ ನಮ್ಮ ಮೆಟ್ರೋ ರೈಲು ತಡರಾತ್ರಿವರೆಗೂ ಸಂಚರಿಸಲಿದೆ.

ಹೌದು, ಡಿಸೆಂಬರ್ 31ರಂದು ಇಂದು ರಾತ್ರಿಯಿಂದ ಬೆಳಗಿನ ಜಾವ 2ಗಂಟೆಯವರೆಗೂ ನಮ್ಮ ಮೆಟ್ರೋ ಸಂಚಾರ ಇರಲಿದೆ ಎಂದು ಬಿಎಂ ಆರ್ ಸಿ ಎಲ್ ಮಾಹಿತಿ ನೀಡಿದೆ.

ರಾತ್ರಿ 11ಗಂಟೆಯ ಕೊನೇ ರೈಲನ್ನು ಜ.2ರ ಬೆಳಗಿನ ಜಾವ 2 ಗಂಟೆಯವರೆಗೆ ವಿಸ್ತರಿಸಲಾಗಿದೆ. ಟ್ರಿನಿಟಿ ಹಾಗೂ ಕಬ್ಬನ್ ನಿಲ್ದಾಣಗಳವರೆಗೆ ಪ್ರಯಾಣಿಕರಿಗೆ 50 ರೂಪಾಯಿ ಪೇಪರ್ ಟಿಕೆಟ್ ನೀಡಲಾಗುತ್ತದೆ. ಡಿ.31ರಂದು ಟೆಕೆಟ್ ವಿತರಣೆ ಇರುವುದಿಲ್ಲ. ಹೀಗಾಗಿ ಮುಂಚಿತವಾಗಿಯೇ ಟಿಕೆಟ್ ಪಡೆಯಬೇಕು ಎಂದು ಬಿಎಂಆರ್ ಸಿ ಎಲ್ ತಿಳಿಸಿದೆ.
ಸುರಕ್ಷತೆಯ ದೃಷ್ಟಿಯಿಂದ ರಾತ್ರಿ 11.30ರ ನಂತರ ಎಂ.ಜಿ. ರಸ್ತೆಯ ಮೆಟ್ರೊ ನಿಲ್ದಾಣ ಪ್ರವೇಶ ನಿರ್ಬಂಧಿಸಬೇಕು ಎಂದು ಪೊಲೀಸ್ ಇಲಾಖೆ ಸೂಚಿಸಿರುವುದರಿಂದ ಅಂದು ಹೆಚ್ಚುವರಿ ಅವಧಿಯಲ್ಲಿ ಎಂ.ಜಿ.ರಸ್ತೆಯಿಂದ ಪ್ರಯಾಣ ಬೆಳೆಸುವ ಮೆಟ್ರೊ ಪ್ರಯಾಣಿಕರು ಟ್ರಿನಿಟಿ ಅಥವಾ ಕಬ್ಬನ್ ಪಾರ್ಕ್ ಮೆಟ್ರೊ ನಿಲ್ದಾಣಗಳಿಗೆ ತೆರಳಿ ಸಂಚಾರ ಮಾಡಬಹುದು ಎಂದು ಸೂಚಿಸಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read