ಬೆಂಗಳೂರು : ‘ವಿಕ್ರಂಸಿಂಹ’ ಬಂಧನದ ಮೂಲಕ ನಿಸರ್ಗದ ಶೋಕಕ್ಕೆ ನ್ಯಾಯ ಸಿಕ್ಕಂತಾಗಿದೆ ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.
ಪಾರ್ಲಿಮೆಂಟ್ ದಾಳಿಕೋರರಿಗೆ ಪಾಸ್ ನೀಡಿದ್ದ ಬ್ಯಾರಿಕೆಡ್ ಶೂರ ಪ್ರತಾಪ್ ಸಿಂಹ ಅವರ ಸಹೋದರ ಕಾಡಿನ ಕಳ್ಳ ವಿಕ್ರಮ್ ಸಿಂಹರ ಬಂಧನವಾಗಿದೆ. ಈ ಬಂಧನದ ಮೂಲಕ ನಿಸರ್ಗದ ಶೋಕಕ್ಕೆ ನ್ಯಾಯ ಸಿಕ್ಕಂತಾಗಿದೆ. ನನ್ನ ತಮ್ಮ ತಪ್ಪೇ ಮಾಡಿಲ್ಲ ಎನ್ನುತ್ತಿದ್ದಪ್ರತಾಪ್ ಸಿಂಹ ಅವರೇ, ನಿಮ್ಮ ತಮ್ಮ ತಲೆಮರೆಸಿಕೊಂಡಿದ್ದೇಕೆ? ಈಗ ಬಂಧನವಾಗಿದ್ದೇಕೆ? ಕಾಡುಗಳ್ಳ ವೀರಪ್ಪನ್ ಸ್ಥಾನ ತುಂಬುವಂತೆ ನಿಮ್ಮ ಸಹೋದರನನ್ನು ತಯಾರು ಮಾಡುತ್ತಿದ್ರಾ? ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.
ಬ್ಯಾರಿಕೆಡ್ ವೀರ ಪ್ರತಾಪ್ ಸಿಂಹ ಅವರೇ, ಪ್ರಭಾವ ಬೀರಿದ ಮಾತ್ರಕ್ಕೆ ಸಂಸತ್ ದಾಳಿಕೋರರಿಗೆ ಪಾಸ್ ನೀಡಿದ ಪ್ರಕರಣದಿಂದ ತಪ್ಪಿಸಿಕೊಳ್ಳಬಹುದು ಎಂದು ನಂಬಿದ್ದೀರಿ, ಆದರೆ ನಿಮ್ಮ ಸಹೋದರನ ಮರಗಳ್ಳತನದ ದಂಧೆಯಲ್ಲಿ ಕಾನೂನಿನ ಕುಣಿಕೆಯಿಂದ ತಪ್ಪಿಸಲಾರಿರಿ. ಕೋಟ್ಯಂತರ ರೂಪಾಯಿ ಬೆಲೆ ಬಾಳುವ ಮರಗಳನ್ನು ಯಾವುದೇ ಅಂಜಿಕೆ ಇಲ್ಲದೆ ಕಡಿದು ಕಳ್ಳಸಾಗಣೆಗೆ ಮುಂದಾಗಿದ್ದು ಯಾವ ಸೀಮೆಯ ನೈತಿಕತೆ ಸ್ವಾಮಿ ನಿಮ್ಮದು? ಇಂತಹ ಇನ್ಯಾವ ಬಗೆಯ ಕಳ್ಳ ದಂಧೆಗಳಿವೆ ನಿಮ್ಮದು? ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.