![](https://kannadadunia.com/wp-content/uploads/2023/03/v-somanna2-1678008226.jpg)
ಬೆಂಗಳೂರು : ಕಾಂಗ್ರೆಸ್ ಸೇರ್ಪಡೆ ವದಂತಿ ಕುರಿತಂತೆ ಮಾಜಿ ಸಚಿವ ವಿ.ಸೋಮಣ್ಣ ಸ್ಪಷ್ಟನೆ ನೀಡಿದ್ದು, ನಾನು ಕಾಂಗ್ರೆಸ್ ಅಭ್ಯರ್ಥಿ ಅಲ್ಲ ಎಂದು ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧೆ ಕುರಿತಂತೆ ವದಂತಿಯಾಗಿದೆ. ನಾನು ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಅಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.
ರಾಷ್ಟ್ರೀಯ ವರಿಷ್ಠರು ನನಗೆ ಈಗಾಗಲೇ ಎರಡು ಬಾರಿ ಕರೆದಿದ್ದಾರೆ. ರಾಷ್ಟ್ರೀಯ ವರಿಷ್ಠರ ಮಾತಿಗೆ ನಾನು ಬದ್ಧನಾಗಿದ್ದೇನೆ. ನಮ್ಮ ಮೇಲೆ ಗದಾಪ್ರಹಾರ ಆಗದಂತೆ ಸೂಚನೆ ನೀಡುವಂತೆ ಹೇಳಿದ್ದೇನೆ. ಜನವರಿ 10 ಕ್ಕೆ ಎಲ್ಲವೂ ಬಗೆಹರಿಯುತ್ತದೆ ಎಂಬ ವಿಶ್ವಾಸವಿದೆ ಎಂದು ತಿಳಿಸಿದ್ದಾರೆ.
ಕೆಲವರ ಸಮ್ಮುಖದಲ್ಲಿ ಚರ್ಚೆ ನಡೆಸುವಂತೆ ಹೇಳಿದ್ದೇನೆ. ನನಗಾದ ತೊಂದ್ರೆ ಸರಿಪಡಿಸಲು ವರಿಷ್ಠರಿಗೆ ಹೇಳಿದ್ದೇನೆ. ಜನವರಿ 6 ಅಥವಾ 7 ರಂದು ದೆಹಲಿಗೆ ಬರುವಂತೆ ಕರೆದಿದ್ದಾರೆ ಎಂದು ಹೇಳಿದ್ದಾರೆ.