alex Certify BREAKING : ‘ಮಾಲ್ ಆಫ್ ಏಷ್ಯಾ’ ಪ್ರವೇಶ ನಿರ್ಬಂಧ ಪ್ರಶ್ನಿಸಿ ‘ಹೈಕೋರ್ಟ್’ ಮೊರೆ, ರಿಟ್ ಅರ್ಜಿ ಸಲ್ಲಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ‘ಮಾಲ್ ಆಫ್ ಏಷ್ಯಾ’ ಪ್ರವೇಶ ನಿರ್ಬಂಧ ಪ್ರಶ್ನಿಸಿ ‘ಹೈಕೋರ್ಟ್’ ಮೊರೆ, ರಿಟ್ ಅರ್ಜಿ ಸಲ್ಲಿಕೆ

ಬೆಂಗಳೂರು: ಜನವರಿ 15 ರವರೆಗೆ ‘ಮಾಲ್ ಆಫ್ ಏಷ್ಯಾ ಪ್ರವೇಶ’ ನಿರ್ಬಂಧ ವಿಧಿಸಿರುವುದನ್ನು ಪ್ರಶ್ನಿಸಿ ಮಾಲ್ ನ ಆಡಳಿತ ಮಂಡಳಿ ಹೈಕೋರ್ಟ್ ಮೊರೆ ಹೋಗಿದೆ.

144 ಸೆಕ್ಷನ್ ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸುವ ಮೂಲಕ ಬೆಂಗಳೂರು ನಗರ ಪೊಲೀಸರು ‘ ಮಾಲ್ ಆಫ್ ಏಷ್ಯಾ ಪ್ರವೇಶ’ ಬಂದ್ ಮಾಡಿಸಿದ್ದರು. ಈ ಕ್ರಮವನ್ನು ಪ್ರಶ್ನಿಸಿ ಮಾಲ್ ಆಫ್ ಏಷ್ಯಾ ಆಡಳಿತ ಮಂಡಳಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದೆ. ಸ್ಪಾರ್ಕಲ್ ಒನ್ ಮಾಲ್ ಡೆವಲಪರ್ಸ್ ಲಿಮಿಟೆಡ್ ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿದ್ದು, ಏಕಸದಸ್ಯ ನ್ಯಾಯಪೀಠದಲ್ಲಿ ತುರ್ತು ವಿಚಾರಣೆಯನ್ನು ಕೈಗೆತ್ತಿಕೊಳ್ಳಲಾಗಿದೆ.

ಬೆಂಗಳೂರಿನ ಬ್ಯಾಟರಾಯನಪುರ ಬಳಿ ಇರುವ ಮಾಲ್ ಆಫ್ ಏಷ್ಯಾವನ್ನು ಭಾನುವಾರದಿಂದ ( ಇಂದಿನಿಂದ) 16ದಿನಗಳ ಕಾಲ ಬಂದ್ ಮಾಡುವಂತೆ ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಆದೇಶಿಸಿದ್ದಾರೆ. ಡಿ.31ರಿಂದ ಜನವರಿ 15ರವರೆಗೆ ಮಾಲ್ ಬಂದ್ ಆಗಲಿದ್ದು, ಸಾರ್ವಜನಿಕರಿಗೆ ಪ್ರವೇಶ ನಿಷೇಧಿಸಲಾಗಿದೆ. ನಾಮಫಲಕದಲ್ಲಿ ಶೇ 60ರಷ್ಟು ಕನ್ನಡ ಬಳಕೆ ಮಾಡಬೇಕು, ಇಲ್ಲವಾದಲ್ಲಿ ಮಾಲ್ ಧ್ವಂಸ ಮಾಡುತ್ತೇವೆ ಎಂದು ಮಾಲ್ ಆಫ್ ಏಷ್ಯಾ ಎದುರು ಕನ್ನಡ ಪರ ಹೋರಾಟಗಾರರು ತೀವ್ರ ಪ್ರತಿಭಟನೆ ನಡೆಸಿದ್ದರು. ಈ ಬೆನ್ನಲ್ಲೇ ಕಾನೂನು, ಸುವ್ಯವಸ್ಥೆ ನಿರ್ವಹಿಸುವ ದೃಷ್ಟಿಯಿಂದ ಮಾಲ್ ನಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ನಗರ ಪೊಲೀಸ್ ಆಯುಕ್ತರು ಆದೇಶ ಹೊರಡಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...