alex Certify ವೈದ್ಯರ ನಿರ್ಲಕ್ಷ್ಯ ಆರೋಪ : ಚಿಕ್ಕಮಗಳೂರು ಜಿಲ್ಲಾಸ್ಪತ್ರೆಯಲ್ಲಿ ನರಳಿ ನರಳಿ ಪ್ರಾಣ ಬಿಟ್ಟ ಬಾಣಂತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವೈದ್ಯರ ನಿರ್ಲಕ್ಷ್ಯ ಆರೋಪ : ಚಿಕ್ಕಮಗಳೂರು ಜಿಲ್ಲಾಸ್ಪತ್ರೆಯಲ್ಲಿ ನರಳಿ ನರಳಿ ಪ್ರಾಣ ಬಿಟ್ಟ ಬಾಣಂತಿ

ಚಿಕ್ಕಮಗಳೂರು : ವೈದ್ಯರ ನಿರ್ಲಕ್ಷ್ಯಕ್ಕೆ ಬಾಣಂತಿ ಸಾವನ್ನಪ್ಪಿರುವ ಆರೋಪ ಚಿಕ್ಕಮಗಳೂರು ನಗರದ ಮಲ್ಲೇಗೌಡ ಜಿಲ್ಲಾಸ್ಪತ್ರೆಯಲ್ಲಿ ಕೇಳಿಬಂದಿದೆ.

ಮೃತರನ್ನು ರಂಜಿತಾ (21) ಎಂದು ಗುರುತಿಸಲಾಗಿದೆ. ಗಂಡು ಮಗುವಿಗೆ ಜನ್ಮ ನೀಡಿದ್ದ ಈಕೆ ಹೊಟ್ಟೆ ನೋವಿನಿಂದ ನರಳಿ ನರಳಿ ಮೃತಪಟ್ಟಿದ್ದಾಳೆ ಎಂದು ಮೃತ ಮಹಿಳೆಯರ ಪೋಷಕರು ಆರೋಪಿಸಿದ್ದಾರೆ.

ಚಿಕ್ಕಮಗಳೂರು ತಾಲೂಕಿನ ಸಖರಾಯಪಟ್ಟಣ ಸಮೀಪದ ವಡೇರಹಳ್ಳಿ ಮೂಲದ ಯುವತಿ ಕಳೆದ 1 ವರ್ಷದ ಹಿಂದೆಯಷ್ಟೇ ಮದುವೆಯಾಗಿದ್ದರು. ಆದರೆ ವೈದ್ಯರ ನಿರ್ಲಕ್ಷ್ಯಕ್ಕೆ ಮಹಿಳೆ ಸಾವನ್ನಪ್ಪಿದ್ದಾಳೆ ಎಂಬ ಆರೋಪ ಕೇಳಿಬಂದಿದೆ.ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ ಬಳಿಕ ಹೊಟ್ಟೆನೋವಿನಿಂದ ನರಳಿ ಮೃತಪಟ್ಟಿದ್ದಾಳೆ ಎನ್ನಲಾಗಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...