![](https://kannadadunia.com/wp-content/uploads/2023/01/eshwarappaphoto-1649943342.jpg)
ಬೆಳಗಾವಿ : ಮರ್ಯಾದೆಯಿಂದ ಮಸೀದಿಗಳನ್ನು ತೆಗೆದುಕೊಳ್ಳಿ, ಇಲ್ಲವಾದರೆ ಹಿಂದೂ ಸಮಾಜ ಮಸೀದಿಗಳನ್ನು ಒಡೆದು ಹಾಕುತ್ತದೆ ಎಂದು ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಪ್ರಚೋದನಾತ್ಮಕ ಹೇಳಿಕೆ ನೀಡಿದ್ದಾರೆ.
ಚಿಕ್ಕೋಡಿಯಲ್ಲಿ ಶ್ರೀ ರಾಮಸೇನೆಯಿಂದ ಮೋದಿ ಗೆಲ್ಲಿಸಿ ಭಾರತ ಉಳಿಸಿ ಅಭಿಯಾನ ಉದ್ಘಾಟಿಸಿ ಮಾತನಾಡಿದ ಅವರು, ಹಿಂದೆ ಮುಸ್ಲಿಮರು ದೇವಸ್ಥಾನ ಒಡೆದು ಮಸೀದಿ ನಿರ್ಮಿಸಿದ್ದಾರೆ. ಮರ್ಯಾದೆಯಿಂದ ಮಸೀದಿಗಳನ್ನು ತೆಗೆದುಕೊಳ್ಳಿ. ಇಲ್ಲವಾದರೆ ಹಿಂದೂ ಸಮಾಜ ಮಸೀದಿಗಳನ್ನು ಒಡೆದು ಹಾಕುತ್ತೆ ಎಂದು ಹೇಳಿದ್ದಾರೆ.
ಪ್ರಧಾನಿ ಮೋದಿಯನ್ನು ವಿಶ್ವವೇ ಮೆಚ್ಚಿಕೊಂಡಿದೆ. ಪಾಕಿಸ್ತಾನ ದೇಶದವರು ಮೋದಿ ಪ್ರಧಾನಿ ಆಗಿ ಬರಲಿ ಎಂದು ಬಯಸುತ್ತಿದ್ದಾರೆ. ಮೋದಿ ಭಾರತೀಯ ಸಂಸ್ಕೃತಿಯನ್ನ ವಿಶ್ವಕ್ಕೆ ಸಾರಿದರು. ದೇಶವನ್ನ ಲೂಟಿ ಮಾಡಿದವರಿಗೆ ಭಾರತೀಯ ಸಂಸ್ಕೃತಿ ನಾಶ ಮಾಡಲು ಆಗಲಿಲ್ಲ ಎಂದು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.