ಇಸ್ಲಾಮಾಬಾದ್ : ಪಾಕಿಸ್ತಾನದಲ್ಲಿ ಹೊಸ ವರ್ಷಕ್ಕೂ ಮುನ್ನ ಉಗ್ರರ ದಾಳಿ ನಡೆದಿದ್ದು, ಪಾಕಿಸ್ತಾನದ ಬಲೂಚಿಸ್ತಾನ ಪ್ರಾಂತ್ಯದ ಪೊಲೀಸ್ ಠಾಣೆಯ ಬಳಿ ರಿಮೋಟ್ ಕಂಟ್ರೋಲ್ ಬಾಂಬ್ ಸ್ಫೋಟಗೊಂಡಿದೆ. ಇದರಲ್ಲಿ ಇಬ್ಬರು ಮಕ್ಕಳು ದುರಂತವಾಗಿ ಸಾವನ್ನಪ್ಪಿದ್ದಾರೆ.
ಬಲೂಚಿಸ್ತಾನದ ಬೋಲಾನ್ ಜಿಲ್ಲೆಯಲ್ಲಿ ಶನಿವಾರ ರಸ್ತೆಬದಿಯ ಬಾಂಬ್ ಸ್ಫೋಟದಲ್ಲಿ 10 ಮತ್ತು 12 ವರ್ಷದ ಇಬ್ಬರು ಮಕ್ಕಳು ಸಾವನ್ನಪ್ಪಿದ್ದಾರೆ. ಬೋಲನ್ ನ ಮ್ಯಾಕ್ ಪ್ರದೇಶದಲ್ಲಿ ಸ್ಫೋಟ ಸಂಭವಿಸಿದೆ. ಮೃತರನ್ನು ಬಾಬರ್ (10) ಮತ್ತು ಅಹ್ಮದ್ ಜಾನ್ (12) ಎಂದು ಗುರುತಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಜೈಲ್ ರಸ್ತೆಯ ಪೊಲೀಸ್ ಠಾಣೆಯ ಹಿಂಭಾಗದ ವಾಹನದ ಕೆಳಗೆ ಬಾಂಬ್ ಅನ್ನು ಅಡಗಿಸಿಡಲಾಗಿತ್ತು ಮತ್ತು ಇಲ್ಲಿಯವರೆಗೆ ಯಾವುದೇ ಗುಂಪು ದಾಳಿಯ ಜವಾಬ್ದಾರಿಯನ್ನು ವಹಿಸಿಕೊಂಡಿಲ್ಲ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಸ್ಫೋಟವು ಎಷ್ಟು ಪ್ರಬಲವಾಗಿತ್ತೆಂದರೆ ಅದು ಸುತ್ತಮುತ್ತಲಿನ ಕಟ್ಟಡಗಳ ಕಿಟಕಿ ಗಾಜುಗಳನ್ನು ಒಡೆದಿದೆ. ದೂರದಿಂದ ಬಾಂಬ್ ಸ್ಫೋಟಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ, ಆದರೆ ಇದನ್ನು ಗಂಭೀರವಾಗಿ ತನಿಖೆ ನಡೆಸಲಾಗುತ್ತಿದೆ.