![](https://kannadadunia.com/wp-content/uploads/2023/12/pratap-simha-brother-vikram-simha.png)
ಹಾಸನ : ಮರ ಕಡಿದು ಸಾಗಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಪ್ರತಾಪ್ ಸಿಂಹ ಸಹೋದರ ವಿಕ್ರಂ ಸಿಂಹಗೆ ಜಾಮೀನು ನೀಡಿ ಬೇಲೂರಿನ ಸೀನಿಯರ್ ಸಿವಿಲ್ ಕೋರ್ಟ್ ಆದೇಶ ಹೊರಡಿಸಿದೆ.
ನಂದಗೋಡನಹಳ್ಳಿಯಲ್ಲಿ 126ಕ್ಕೂ ಹೆಚ್ಚು ಮರ ಕಡಿದು ಸಾಗಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಪ್ರತಾಪ್ ಸಿಂಹ ಸಹೋದರ ವಿಕ್ರಂ ಸಿಂಹ ಅವರನ್ನು ಅರಣ್ಯಾಧಿಕಾರಿಗಳು ಬಂಧಿಸಿದ್ದರು.
ವಿಕ್ರಂ ಪರ ವಕೀಲ ಚಂದ್ರೇಗೌಡ, ಧರ್ಮೇಗೌಡ ಜಾಮೀನು ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಧೀಶರು ಜಾಮೀನು ಮಂಜೂರು ಮಾಡಿದ್ದಾರೆ. ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ನಂದಗೋಡನಹಳ್ಳಿ ಬಳಿ 126ಕ್ಕೂ ಹೆಚ್ಚು ಮರ ಕಡಿದು ಸಾಗಣೆ ಪ್ರಕರಣದಲ್ಲಿ ವಿಕ್ರಂ ಸಿಂಹರನ್ನು ಬಂಧಿಸಲಾಗಿತ್ತು. ವಿಕ್ರಂ ಸಿಂಹರನ್ನು ಇಂದು ನ್ಯಾಯಾಧೀಶರ ಮುಂದೆ ಅರಣ್ಯಾಧಿಕಾರಿಗಳು ಹಾಜರುಪಡಿಸಿದ್ದರು.