HomeKarnatakaಪ್ರೀತಿಸಿ ಮದುವೆಯಾಗಿದ್ದಕ್ಕೆ ಆಕ್ರೋಶ: ಅಂತರ್ಜಾತಿ ವಿವಾಹವಾದ ಯುವಕನ ಮನೆಗೆ ನುಗ್ಗಿ ಹಲ್ಲೆ

ಪ್ರೀತಿಸಿ ಮದುವೆಯಾಗಿದ್ದಕ್ಕೆ ಆಕ್ರೋಶ: ಅಂತರ್ಜಾತಿ ವಿವಾಹವಾದ ಯುವಕನ ಮನೆಗೆ ನುಗ್ಗಿ ಹಲ್ಲೆ

ದಾವಣಗೆರೆ: ವರ್ಷದಿಂದ ಪರಸ್ಪರ ಪ್ರೀತಿಸಿ 20 ದಿನಗಳ ಹಿಂದೆ ಅಂತರ್ಜಾತಿ ವಿವಾಹವಾಗಿದ್ದರಿಂದ ಯುವಕನ ಮನೆಗೆ ನುಗ್ಗಿ ಯುವತಿ ಮನೆಯವರು ಹಲ್ಲೆ ನಡೆಸಿದ್ದಾರೆ.

ದಾವಣಗೆರೆ ಜಿಲ್ಲೆ ಹರಿಹರ ತಾಲೂಕು ಕಮಲಾಪುರ ಗ್ರಾಮದಲ್ಲಿ ಘಟನೆ ನಡೆದಿದೆ. ಸಿದ್ದಾರ್ಥ ಮತ್ತು ಸೃಷ್ಟಿ ಅವರು ಅನ್ಯ ಜಾತಿಯವರಾಗಿದ್ದು, ಪರಸ್ಪರ ಪ್ರೀತಿಸುತ್ತಿದ್ದರು. ಈ ನಡುವೆ ಯುವತಿಗೆ ಆಕೆಯ ಮನೆಯವರು ಬೇರೆ ಹುಡುಗನೊಂದಿಗೆ ಮದುವೆ ಮಾಡಲು ಸಿದ್ಧತೆ ಮಾಡಿಕೊಂಡಿದ್ದರು.

ಸಿದ್ಧಾರ್ಥ ಮತ್ತು ಸೃಷ್ಟಿ 20 ದಿನಗಳ ಹಿಂದೆ ದೇವಾಲಯವೊಂದರಲ್ಲಿ ಮದುವೆಯಾಗಿ ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ಮದುವೆ ನೋಂದಣಿ ಮಾಡಿಸಿದ್ದಾರೆ. ಇದರಿಂದ ಆಕ್ರೋಶಗೊಂಡ ಯುವತಿ ಮನೆಯವರು ಶನಿವಾರ ಸಂಜೆ ಹುಡುಗನ ಮನೆಗೆ ನುಗ್ಗಿ ಗಲಾಟೆ ಮಾಡಿ ಕುಟುಂಬದವರ ಮೇಲೆ ಹಲ್ಲೆ ನಡೆಸಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular