HomeIndiaಡಿಸಿಎಂ ಡಿಕೆಶಿ ಹೂಡಿಕೆ ವಿವರ ಕೇಳಿ ಕೇರಳದ ಜೈಹಿಂದ್ ಟಿವಿ ಚಾನಲ್ ಗೆ ಸಿಬಿಐ ನೋಟಿಸ್

ಡಿಸಿಎಂ ಡಿಕೆಶಿ ಹೂಡಿಕೆ ವಿವರ ಕೇಳಿ ಕೇರಳದ ಜೈಹಿಂದ್ ಟಿವಿ ಚಾನಲ್ ಗೆ ಸಿಬಿಐ ನೋಟಿಸ್

ನವದೆಹಲಿ: ಕರ್ನಾಟಕ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಹೂಡಿಕೆ ಮಾಡಿರುವ ವಿವರ ನೀಡುವಂತೆ ಕೇರಳ ಮೂಲದ ಜೈ ಹಿಂದ್ ಟಿವಿ ಚಾನಲ್ ಗೆ ಸಿಬಿಐ ನೋಟಿಸ್ ಜಾರಿ ಮಾಡಿದೆ.

ಆದಾಯ ಮೀರಿದ ಆಸ್ತಿಗಳಿಕೆ ಪ್ರಕರಣದಲ್ಲಿ ನೋಟಿಸ್ ನೀಡಲಾಗಿದ್ದು, ಜನವರಿ 11ರಂದು ವಿಚಾರಣೆಗೆ ಹಾಜರಾಗುವಂತೆ ಜೈಹಿಂದ್ ಕಮ್ಯುನಿಕೇಷನ್ಸ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಿಗೆ ತಿಳಿಸಲಾಗಿದೆ.

ಡಿಸಿಎಂ ಡಿ.ಕೆ. ಶಿವಕುಮಾರ್ ಮತ್ತು ಅವರ ಪತ್ನಿ ಉಷಾ ಅವರು ಜೈ ಹಿಂದ್ ಚಾನಲ್ ನಲ್ಲಿ ಮಾಡಿರುವ ಹೂಡಿಕೆ, ಅದಕ್ಕೆ ಪ್ರತಿಯಾಗಿ ಪಡೆದ ಲಾಭಾಂಶ, ಹೊಂದಿರುವ ಆಸ್ತಿಯ ವಿವರ ನೀಡಲು ಸೂಚಿಸಲಾಗಿದೆ ಎಂದು ಹೇಳಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular