HomeCrimeSHOCKING: ಹೊಸ ವರ್ಷದ ದಿನವೇ ಘೋರಕೃತ್ಯ, ಕೇಕ್ ತರಲು ಹೋದ ಯುವಕನ ಕೊಲೆ

SHOCKING: ಹೊಸ ವರ್ಷದ ದಿನವೇ ಘೋರಕೃತ್ಯ, ಕೇಕ್ ತರಲು ಹೋದ ಯುವಕನ ಕೊಲೆ

ಬಳ್ಳಾರಿ: ಹೊಸ ವರ್ಷಾಚರಣೆಗೆ ಕೇಕ್ ತರಲು ಹೋಗಿದ್ದ ಯುವಕನನ್ನು ಕೊಲೆ ಮಾಡಲಾಗಿದೆ. ಬಳ್ಳಾರಿಯ ವಡ್ಡರಬಂಡಿ ಪ್ರದೇಶದಲ್ಲಿ ಘಟನೆ ನಡೆದಿದೆ.

ಸೈದುಲ್ಲಾ(24) ಕೊಲೆಯಾದ ಯುವಕ ಎಂದು ಹೇಳಲಾಗಿದೆ. ಹೊಸ ವರ್ಷಾಚರಣೆಗೆ ಸ್ನೇಹಿತನೊಂದಿಗೆ ಕೇಕ್ ತರಲು ಹೋಗಿದ್ದ ವೇಳೆ ಸೈದುಲ್ಲಾ ಮತ್ತು ಬೇರೆ ಯುವಕರ ನಡುವೆ ಕ್ಷುಲ್ಲಕ ವಿಚಾರಕ್ಕೆ ಗಲಾಟೆ ನಡೆದಿದೆ. ಯುವಕರ ಗುಂಪು ಮಾರಕಾಸ್ತ್ರಗಳಿಂದ ಥಳಿಸಿ, ಚಾಕುವಿನಿಂದ ಇರಿದು ಸೈದುಲ್ಲನನ್ನು ಕೊಲೆ ಮಾಡಿದೆ ಎನ್ನಲಾಗಿದೆ.

ಸೈದುಲ್ಲಾ ಜೊತೆಗಿದ್ದ ಮತ್ತೊಬ್ಬನ ಸ್ಥಿತಿ ಗಂಭೀರವಾಗಿದ್ದು, ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಬ್ರೂಸ್ ಪೇಟೆ ತಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದು, ಆರೋಪಿ ರಾಜೇಶ್ ನನ್ನು ಬಂಧಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular