alex Certify BREAKING : ಬೆಂಗಳೂರಿನಲ್ಲಿ ʻನ್ಯೂ ಇಯರ್ʼ ದಿನವೇ ಯುವಕನ ಬರ್ಬರ ಹತ್ಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಬೆಂಗಳೂರಿನಲ್ಲಿ ʻನ್ಯೂ ಇಯರ್ʼ ದಿನವೇ ಯುವಕನ ಬರ್ಬರ ಹತ್ಯೆ

ಬೆಂಗಳೂರು : ಬೆಂಗಳೂರಿನಲ್ಲಿ ಹೊಸ ವರ್ಷದ ದಿನವೇ  ತಡರಾತ್ರಿ ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ ಮಾಡಿರುವ ಘಟನೆ ನಡೆದಿದೆ.

ಬೆಂಗಳೂರಿನ ಹನುಮಂತನಗರದ 80 ಅಡಿ ರಸ್ತೆಯಲ್ಲಿ ತಡರಾತ್ರಿ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ  ಕೊಲೆ ಮಾಡಿರುವ ಘಟನೆ ನಡೆದಿದೆ. ಮೃತ ಯುವಕನನ್ನು ವಿಜಯ್‌ ಎಂದು ಗುರುತಿಸಲಾಗಿದ್ದು, ವಿಜಯ್‌ ನನ್ನು ಹತ್ಯೆಗೈದು ರಸ್ತೆಯಲ್ಲೇ ಶವವನ್ನು ಎಸೆದು ಆರೋಪಿಗಳು ಪರಾರಿಯಾಗಿದ್ದಾರೆ.

ವಿಜಯ್‌ ಬನಶಂಕರಿ ನಿವಾಸಿಯಾಗಿದ್ದು, ಹೊಸ ವರ್ಷದ ಆಚರಣೆಯಲ್ಲಿ ಭಾಗಿಯಾಗಿ ಹೋಗುತ್ತಿದ್ದ ವೇಳೆ ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ ಎನ್ನಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...