HomeKarnatakaBIG NEWS : ರಾಜ್ಯದಲ್ಲಿ 3 ಸಾವಿರ ಪಬ್ಲಿಕ್ ಶಾಲೆಗಳ ಸ್ಥಾಪನೆ : ಶಿಕ್ಷಣ ಸಚಿವ...

BIG NEWS : ರಾಜ್ಯದಲ್ಲಿ 3 ಸಾವಿರ ಪಬ್ಲಿಕ್ ಶಾಲೆಗಳ ಸ್ಥಾಪನೆ : ಶಿಕ್ಷಣ ಸಚಿವ ಮಧು ಬಂಗಾರಪ್ಪ

ಚಿತ್ರದುರ್ಗ : ಮುಂದಿನ ಮೂರು ವರ್ಷದೊಳಗೆ ರಾಜ್ಯಾದ್ಯಂತ 3 ಸಾವಿರ ಪಬ್ಲಿಕ್‌ ಶಾಲೆಗಳನ್ನು ಸ್ಥಾಪನೆ ಮಾಡುವ ಗುರಿ ಹೊಂದಲಾಗಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಅಂದಾಜು ಆರು ಸಾವಿರ ಗ್ರಾಮಪಂಚಾಯತಿಗಳಿದ್ದು, ಪ್ರತಿ ಎರಡು ಗ್ರಾಮಪಂಚಾಯಿತಿಗಳಿಗೆ ಒಂದರಂತೆ ಒಟ್ಟು 3 ಸಾವಿರ ಪಬ್ಲಿಕ್‌ ಶಾಲೆಗಳನ್ನು ತೆರೆಯಲು ನಿರ್ಧರಿಸಲಾಗಿದೆ ಎಂದು ಹೇಳಿದ್ದಾರೆ.

ಇನ್ನು 2024 ರೊಳಗೆ 500 ಪಬ್ಲಿಕ್‌ ಶಾಲೆಗಳನ್ನು ಮೇಲ್ದರ್ಜೆಗೇರಿಸಲು ಈಗಾಗಲೇ ಯೋಜನೆ ರೂಪಿಸಲಾಗಿದ್ದು, ಸ್ಥಳ ಕೂಡ ಗುರುತಿಸಲಾಗಿದೆ ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular