HomeKarnatakaBREAKING : ಭದ್ರಾವತಿ ಬಳಿ ಭೀಕರ ಬೈಕ್ ಅಪಘಾತ : ಸ್ಥಳದಲ್ಲೇ ಇಬ್ಬರು ಯುವಕರು ದುರ್ಮರಣ

BREAKING : ಭದ್ರಾವತಿ ಬಳಿ ಭೀಕರ ಬೈಕ್ ಅಪಘಾತ : ಸ್ಥಳದಲ್ಲೇ ಇಬ್ಬರು ಯುವಕರು ದುರ್ಮರಣ

ಬೆಂಗಳೂರು : ಬರ್ತ್ ಡೇ ಆಚರಿಸಲು ತೆರಳುತ್ತಿದ್ದ ಇಬ್ಬರು ಯುವಕರು ಬೈಕ್ ಅಪಘಾತದಲ್ಲಿ ದುರ್ಮರಣಕ್ಕೀಡಾದ ಘಟನೆ ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಸೀಗೇಬಾವಿ ಗ್ರಾಮದಲ್ಲಿ ನಡೆದಿದೆ.

ಮೃತರನ್ನು ರಮೇಶ್ ಹಾಗೂ ಚೇತನ್ ಎಂದು ಗುರುತಿಸಲಾಗಿದೆ. ಬರ್ತ್ ಡೇ ಆಚರಿಸಿಕೊಳ್ಖಲು ಇಬ್ಬರು ಯುವಕರು ಹೊನ್ನವಿಲೆಯಿಂದ ಭದ್ರಾವತಿಗೆ ತೆರಳುತ್ತಿದ್ದರು. ಈ ವೇಳೆ ಬೊಲೆರೊ ವಾಹನವೊಂದು ಬೈಕ್ ಗೆ ಡಿಕ್ಕಿಯಾಗಿದೆ. ಪರಿಣಾಮ ಸ್ಥಳದಲ್ಲೇ ಇಬ್ಬರು ಮೃತಪಟ್ಟಿದ್ದಾರೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿ ತನಿಖೆ ನಡೆಸುತ್ತಿದ್ದಾರೆ. ಹೊಸ ವರ್ಷದ ಆರಂಭದಲ್ಲೇ ರಾಜ್ಯದಲ್ಲಿ ಹಲವು ಅಪಘಾತ , ಆತ್ಮಹತ್ಯೆ ಪ್ರಕರಣಗಳು ನಡೆದಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular