HomeKarnatakaBIG NEWS: ಮೂರು ದಶಕಗಳ ಹಿಂದಿನ ರಾಮಜನ್ಮಭೂಮಿ ಹೋರಾಟ ಪ್ರಕರಣಕ್ಕೆ ಮರುಜೀವ; ಓರ್ವನ ಬಂಧನ

BIG NEWS: ಮೂರು ದಶಕಗಳ ಹಿಂದಿನ ರಾಮಜನ್ಮಭೂಮಿ ಹೋರಾಟ ಪ್ರಕರಣಕ್ಕೆ ಮರುಜೀವ; ಓರ್ವನ ಬಂಧನ

ಹುಬ್ಬಳ್ಳಿ: ಬರೋಬ್ಬರಿ 31 ವರ್ಷಗಳ ಬಳಿಕ ಹುಬ್ಬಳ್ಳಿ ರಾಮಜನ್ಮಭೂಮಿ ಹೋರಾಟ ಪ್ರಕರಣಕ್ಕೆ ಮತ್ತೆ ಮರುಜೀವ ಬಂದಿದೆ. ಹೋರಾಟಗಾರರಿಗೆ ಬಂಧನ ಭೀತಿ ಶುರುವಾಗಿದೆ.

31 ವರ್ಷಗಳ ಬಳಿಕ ಇದೀಗ ಓರ್ವ ಆರೋಪಿಯನ್ನು ಬಂಧಿಸಲಾಗಿದ್ದು, ಉಳಿದವರಿಗಾಗಿ ಪೊಲೀಸರು ವಿಶೇಷ ತಂಡ ರಚಿಸಿದ್ದಾರೆ.

ರಾಮಜನ್ಮಭೂಮಿ ಹೋರಾಟ ಪ್ರಕರಣದ ಮೂರನೇ ಆರೋಪಿ ಶ್ರೀಕಾಂತ್ ಪೂಜಾರಿ ಎಂಬಾತನನ್ನು ಹುಬಳ್ಳಿ ಪೊಲೀಸರು ಶುಕ್ರವಾರ ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಉಳಿದ ಆರೋಪಿಗಳಿಗಾಗಿ ಹುಡುಕಾಟ ನಡೆಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪ್ರಕರಣ ದಾಖಲಾದಾಗ ಆರೋಪಿಗಳು 30-35 ವರ್ಷದವರಾಗಿದ್ದರು, ಆದರೀಗ ಅವರಿಗೆ 60-65 ವರ್ಷದವರಾಗಿದ್ದಾರೆ, ರಾಜು ಧರ್ಮದಾಸ್, ಅಶೋಕ್ ಕಲಬುರ್ಗಿ, ಷಣ್ಮುಖ ಕಾಟಗಾರ, ಗುರುನಾಥಸಾ ಕಾಟಿಗಾರ, ರಾಮಚಂದ್ರಸಾ ಕಲಬುರ್ಗಿ, ಅಮೃತ ಕಲಬುರ್ಗಿ ಸೇರಿದಂತೆ ಐವರು ಆರೋಪಿಗಳಿಗೆ ಹುಡುಕಾಟ ನಡೆಸಲಾಗಿದೆ.

1995 ಡಿಸೆಂಬರ್ 5ರಂದು ಹುಬ್ಬಳ್ಳಿ ನಗರದಲ್ಲಿ ಕರಸೇವೆ ವೇಳೆ ಗಲಭೆ ಸಂಭವಿಸಿ ಒಂದು ಮಳಿಗೆಗೆ ಬೆಂಕಿ ಹಚ್ಚಲಾಗಿತ್ತು. ಪ್ರಕರಣ ಸಂಬಂಧ 9 ಜನರ ವಿರುದ್ಧ ಹುಬ್ಬಳ್ಳಿ ಶಹರ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿತ್ತು. ಇದೀಗ ಈ ಪ್ರಕರಣಕ್ಕೆ ಮತ್ತೆ ಮರುಜೀವ ನೀಡಲು ಪೊಲೀಸರು ಮುಂದಾಗಿದ್ದಾರೆ ಎನ್ನಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular