HomeKarnatakaRain alert Karnataka : ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ ‘ಮಳೆ’ :...

Rain alert Karnataka : ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ ‘ಮಳೆ’ : ‘ಹವಾಮಾನ ಇಲಾಖೆ’ ಮುನ್ಸೂಚನೆ

ಬೆಂಗಳೂರು : ರಾಜ್ಯದ ಈ ಜಿಲ್ಲೆಗಳಲ್ಲಿ ಇಂದಿನಿಂದ ಒಂದು ವಾರ ಹಲವು ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಜನವರಿ 2 ರಿಂದ 8 ರವರೆಗೆ ಕರಾವಳಿಯ ಎಲ್ಲಾ ಜಿಲ್ಲೆಗಳಲ್ಲಿಸಾಧಾರಣ ಮಳೆಯಾಗಲಿದೆ. ಜನವರಿ 5 ಮತ್ತು ಜನವರಿ 6 ರಂದು ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ,ಕೊಪ್ಪಳ, ರಾಯಚೂರು, ವಿಜಯಪುರದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರ್ನಾಟಕದಲ್ಲಿ ಬಹುತೇಕ ಜಿಲ್ಲೆಗಳಲ್ಲಿ ಚಳಿಯ ವಾತಾವರಣ ಶುರುವಾಗಿದೆ. ಬೆಳಗಿನ ಜಾವ ಮಂಜು ಮುಸುಕಿದ ವಾತಾವರಣವಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಜ್ಯದಲ್ಲಿ ಕಳೆದ ವರ್ಷ ವಾಡಿಕೆಗಿಂತ ಸಾಕಷ್ಟು ಮಳೆ ಕಡಿಮೆಯಾದ ಹಿನ್ನೆಲೆಯಲ್ಲಿ ತೀವ್ರ ಬರಗಾಲ ಎದುರಾಗಿತ್ತು, ಆದರೆ ರಾಜ್ಯದಲ್ಲಿ ಈ ವರ್ಷ ಉತ್ತಮ ಮಳೆಯಾಗಲಿದೆ ಎನ್ನಲಾಗಿದೆ.

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular