BIG NEWS: ಮಾಜಿ ಸಚಿವ ಆಂಜನೇಯ ಸಿದ್ದರಾಮಯ್ಯನವರನ್ನೇ ಪೂಜಿಸಲಿ; ಯತ್ನಾಳ್ ಟಾಂಗ್

ವಿಜಯಪುರ: ಮಾಜಿ ಸಚಿವ ಹೆಚ್.ಆಂಜನೇಯ ಅವಿವೇಕಿ. ಆಂಜನೇಯ ತಮ್ಮ ಮನೆಯಲ್ಲಿ ಸಿದ್ದರಾಮಯ್ಯನವರಿಗೇ ಪೂಜೆ ಮಾಡಲಿ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಟೀಕಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ ಅವರನ್ನು ರಾಮನಿಗೆ ಹೋಲಿಸಿರುವ ಮಾಜಿ ಸಚಿವ ಹೆಚ್.ಆಂಜನೇಯ ವಿರುದ್ಧ ಕಿಡಿಕಾರಿರುವ ಶಾಸಕ ಯತ್ನಾಳ್, ಇಂತಹ ಅವಿವೇಕಿಗಳು ಸ್ವಜನಪಕ್ಷಪಾತಿಗಳು. ಹಿಂದೂ ವಿರೋಧಿಗಳು ಇವರು ರಾಜ್ಯದ ಸಚಿವರಾಗಿದ್ದರು ಎಂಬುದೇ ರಾಜ್ಯದ ದೌರ್ಭಾಗ್ಯ. ಆಂಜನೇಯಪ್ಪನವರ ಪೂಜ್ಯ ದೇವರಾದ ಸಿದ್ದರಾಮಯ್ಯನವರಿಗೆ ಅವರ ಮನೆಯಲ್ಲಿ ಸಕಲ ರೀತಿಯಲ್ಲಿ ಪೂಜಾ ಕೈಂಕರ್ಯಗಳನ್ನು ನಡೆಸಲಿ ಎಂದು ಕಿಡಿಕಾರಿದ್ದಾರೆ.

ಹಿಂದೂಗಳ ಆರಾಧ್ಯದೈವ ಶ್ರೀರಾಮ ದೇವರ ಬಗ್ಗೆ ಮಾತನಾಡುವುದನ್ನು ನಿಲ್ಲಿಸಲಿ, ಘನತೆಯಿಂದ ಗೌರವದಿಂದ ವರ್ತಿಸಲಿ ಎಂದು ಗುಡುಗಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read