ಮೈಸೂರು : ಕೆಎಸ್ ಆರ್ ಟಿಸಿ ಬಸ್ ಹಾಗೂ ಜೀಪ್ ನಡುವೆ ಅಪಘಾತ ಸಂಭವಿಸಿ ಮೂವರು ಸಾವನ್ನಪ್ಪಿದ ಘಟನೆ ಮೈಸೂರು ಜಿಲ್ಲೆಯ ಹುಣಸೂರು ಪಟ್ಟಣದ ಅಯ್ಯಪ್ಪಸ್ವಾಮಿ ಬೆಟ್ಟದ ಬಳಿ ನಡೆದಿದೆ.
ವೇಗವಾಗಿ ಬಂದ ಕೆಎಸ್ ಆರ್ ಟಿಸಿ ಬಸ್ ಹಾಗೂ ಜೀಪ್ ನಡುವೆ ಡಿಕ್ಕಿ ಸಂಭವಿಸಿದೆ. ಜೀಪ್ ಚಾಲಕ ಸೇರಿದಂತೆ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನೆ ನಡೆದ ಸ್ಥಳಕ್ಕೆ ಹುಣಸೂರು ಠಾಣೆ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿದ್ದಾರೆ.