
ಹೊಸ ವರ್ಷಾಚರಣೆ ಹಿನ್ನೆಲೆ ನಿನ್ನೆ ಬೆಂಗಳೂರಿನ ಹಲವು ಕಡೆ ವಿವಿಧ ಕಾರ್ಯಕ್ರಮಗಳು ನಡೆದಿದ್ದವು. ಹೊಸ ವರ್ಷಾಚರಣೆ ಹಿನ್ನೆಲೆ ಹೆಚ್ಚುವರಿ ಬಸ್ಗಳ ಸೇವೆ ನಿಯೋಜಿಸಿದ ಹಿನ್ನೆಲೆ ಬಿಎಂಟಿಸಿ ಒಂದೇ ದಿನದಲ್ಲಿ4.37 ಕೋಟಿ ರೂ.ಆದಾಯಗಳಿಸಿದೆ. ಸೋಮವಾರ ಒಂದೇ ದಿನ ಬಿಎಂಟಿಸಿಗೆ 4,37,70,000 ರೂ. ಆದಾಯ ಬಂದಿದೆ.
ಹಾಗೂ ಡಿ.31 ರಂದು ಮಧ್ಯರಾತ್ರಿ 2 ಗಂಟೆವರೆಗೂ ಬಿಎಂಟಿಸಿ ಬಸ್ ಸಂಚಾರ ವಿಸ್ತರಣೆ ಮಾಡಲಾಗಿತ್ತು. ಎಂ.ಜಿ.ರೋಡ್, ಬ್ರಿಗೇಡ್ ರೋಡ್, ಇಂದಿರಾನಗರ, ಕೋರಮಂಗಲ, ಶಾಂತಿನಗರ, ಯಲಹಂಕ ಸೇರಿ ಹಲವು ಏರಿಯಾಗಳಿಗೆ ಹೆಚ್ಚುವರಿ ಬಸ್ ಸಂಚಾರದ ವ್ಯವಸ್ಥೆ ಮಾಡಲಾಗಿತ್ತು.

