HomeKarnatakaBIG NEWS: ಮದುವೆಯಾಗುವುದಾಗಿ ನಂಬಿಸಿ ಯುವತಿ ಮೇಲೆ ಲೈಂಗಿಕ ದೌರ್ಜನ್ಯ; ಆರೋಪಿ ಅರೆಸ್ಟ್

BIG NEWS: ಮದುವೆಯಾಗುವುದಾಗಿ ನಂಬಿಸಿ ಯುವತಿ ಮೇಲೆ ಲೈಂಗಿಕ ದೌರ್ಜನ್ಯ; ಆರೋಪಿ ಅರೆಸ್ಟ್

ಮಂಗಳೂರು: ಮದುವೆಯಾಗುವುದಾಗಿ ನಂಬಿಸಿ 17 ವರ್ಷದ ಯುವತಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ ಆರೋಪದಲ್ಲಿ ಆರೋಪಿಯನ್ನು ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.

ಮೊಹಮ್ಮದ್ ರಝೀನ್ ಬಂಧಿತ ಆರೋಪಿ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ನಿವಾಸಿಯಾಗಿರುವ ಯುವತಿಯನ್ನು ಪ್ರೀತಿಸಿದ್ದ ಆರೋಪಿ, ಮದುವೆಯಾಗುವುದಾಗಿ ನಂಬಿಸಿ ಮಂಗಳೂರಿನ ಕುಂಪಲ ಗ್ರಾಮಕ್ಕೆ ಕರೆಸಿಕೊಂಡಿದ್ದಾನೆ. ಬಾಡಿಗೆ ಮನೆಯೊಂದರಲ್ಲಿ ಯುವತಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದಾನೆ.

ಸಂತ್ರಸ್ತ ಯುವತಿ ಉಳ್ಳಾಲ ಠಾಣೆಯಲ್ಲಿ ದೂರು ನೀಡಿದ್ದು, ಆರೋಪಿ ವಿರುದ್ಧ ಪೋಕ್ಸೋ ಕೇಸ್ ದಾಖಲಾಗಿದೆ. ಸದ್ಯ ಆರೋಪಿ ಮೊಹಮ್ಮದ್ ನನ್ನು ಬಂಧಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular