ಬೆಂಗಳೂರು : KERC (ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ) ರಾಜ್ಯದ ಜನತೆಗೆ ನೆಮ್ಮದಿ ಸುದ್ದಿ ನೀಡಿದ್ದು, ವಿದ್ಯುತ್ ದರ ಇಳಿಕೆ ಮಾಡಿದೆ ಎಂದು ಹೇಳಲಾಗಿದೆ.
ಇಂಧನ ಮತ್ತು ವಿದ್ಯುತ್ ಖರೀದಿ ವೆಚ್ಚ ಹೊಂದಾಣಿಕೆ ಶುಲ್ಕ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ KERC ವಿದ್ಯುತ್ ದರ ಇಳಿಕೆ ಮಾಡಿದೆ ಎನ್ನಲಾಗಿದೆ.
ಮೆಸ್ಕಾಂ ವ್ಯಾಪ್ತಿಯಲ್ಲಿ 31 ಪೈಸೆ , ಬೆಸ್ಕಾಂ ವ್ಯಾಪ್ತಿಯಲ್ಲಿ ಪ್ರತಿ ಯೂನಿಟ್ಗೆ 37 ಪೈಸೆ, , ಹೆಸ್ಕಾಂ ವ್ಯಾಪ್ತಿಯಲ್ಲಿ 3 ಪೈಸೆ, ಜೆಸ್ಕಾಂ ವ್ಯಾಪ್ತಿಯಲ್ಲಿ 51 ಪೈಸೆ ಮತ್ತು ಸೆಸ್ಕ್ ವ್ಯಾಪ್ತಿಯಲ್ಲಿ ಪ್ರತಿ ಯೂನಿಟ್ಗೆ 39 ಪೈಸೆ ಕಡಿಮೆಯಾಗಲಿದೆ. ಜನವರಿ ತಿಂಗಳ ವಿದ್ಯುತ್ ಬಿಲ್ನಲ್ಲಿ ಸರಿದೂಗಿಸುವಂತೆ ಎಲ್ಲಾ ಎಸ್ಕಾಂಗಳಿಗೆ ಕೆಇಆರ್ಸಿ ಸೂಚನೆ ನೀಡಿದೆ ಎನ್ನಲಾಗಿದೆ. ಈ ಮೂಲಕ ಜನವರಿ ತಿಂಗಳಲ್ಲಿ ವಿದ್ಯುತ್ ಬಿಲ್ ಕಡಿಮೆ ಬರಲಿದೆ ಎನ್ನಲಾಗಿದೆ.