HomeKarnatakaBIG NEWS: 7 ತಿಂಗಳು ವಿಪಕ್ಷ ನಾಯಕನ ಆಯ್ಕೆ ಮಾಡಲು ಸಾಧ್ಯವಾಗಿರಲಿಲ್ಲ, ಈಗ ಚುನಾವಣೆ ಸಮೀಪಿಸುತ್ತಿದೆ...

BIG NEWS: 7 ತಿಂಗಳು ವಿಪಕ್ಷ ನಾಯಕನ ಆಯ್ಕೆ ಮಾಡಲು ಸಾಧ್ಯವಾಗಿರಲಿಲ್ಲ, ಈಗ ಚುನಾವಣೆ ಸಮೀಪಿಸುತ್ತಿದೆ ಎಂದು ಬಿಜೆಪಿಯವರು ರಾಜಕೀಯ ಮಾಡುತ್ತಿದ್ದಾರೆ; ಡಿಸಿಎಂ ಕಿಡಿ

ಬೆಂಗಳೂರು: ಕಾಂಗ್ರೆಸ್ ದ್ವೇಷದ ರಾಜಕೀಯ ಮಾಡುತ್ತಿದೆ ಎಂಬ ಬಿಜೆಪಿ ನಾಯಕರ ಹೇಳಿಕೆಗೆ ಪ್ರತಿಕ್ರಿಯಿಸಿರುವ ಡಿಸಿಎಂ ಡಿ.ಕೆ.ಶಿವಕುಮಾರ್, ನಾವು ದ್ವೇಷ ರಾಜಕಾರಣ ಮಾಡುತ್ತಿಲ್ಲ. ಕಾನೂನು ಸುವ್ಯವಸ್ಥೆ ಕಾಪಾಡುವ ಕೆಲಸ ಮಾಡುತ್ತಿದ್ದೇವೆ ಎಂದು ಹೇಳಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ, ನಮ್ಮದು ಶಾಂತಿಪ್ರಿಯ ರಾಜ್ಯ. ಇಲ್ಲಿ ದುಷ್ಕೃತ್ಯಕ್ಕೆ ಅವಕಾಶವಿಲ್ಲ. ಕರಸೇವಕರ ಬಂಧನ ವಿಚಾರವಾಗಿ ಬಿಜೆಪಿ ರಾಜಕೀಯ ಸ್ಟಂಟ್ ಮಾಡುತ್ತಿದೆ ಎಂದು ಹೇಳಿದರು.

ಬಾಕಿ ಪ್ರಕರಣಗಳ ವಿಲೇವಾರಿಗೆ ಸರ್ಕಾರ ಮುಂದಾಗಿರುವುದಾಗಿ ಗೃಹ ಸಚಿವರು ಈಗಾಗಲೇ ಸ್ಪಷ್ಟನೆ ನೀಡಿದ್ದಾರೆ. ಯಾರು ರಾಜ್ಯಕ್ಕೆ ಅಗೌರವ ನೀಡಿದ್ದಾರೆ, ಯಾರು ಕಾನೂನು ಉಲ್ಲಂಘಿಸಿದ್ದಾರೆ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು. ಬಿಜೆಪಿಯವರಿಗೆ 7 ತಿಂಗಳ ಕಾಲ ವಿರೋಧ ಪಕ್ಷದ ನಾಯಕನ ಆಯ್ಕೆ ಮಾಡಲು ಸಾಧ್ಯವಾಗಿರಲಿಲ್ಲ. ಈಗ ಚುನಾವಣೆ ಸಮೀಪಿಸುತ್ತಿದೆ. ಹೀಗಾಗಿ ತಾವು ರಾಜಕೀಯವಾಗಿ ಬದುಕಿದ್ದೇವೆ ಎಂದು ತೋರಿಸಿಕೊಳ್ಳಲು ಹೀಗೆ ಮಾತನಾಡುತ್ತಿದ್ದಾರೆ ಎಂದು ಟಾಂಗ್ ನೀಡಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಜನ ಇದಕ್ಕೆ ಉತ್ತರ ನೀಡುತ್ತಾರೆ. ನಾವು ಅವರಂತೆ ಅಧಿಕಾರ ದುರ್ಬಳಕೆ ಮಾಡಿಕೊಂಡು, ಬೇರೆ ಪಕ್ಷದ ಕಾರ್ಯಕರ್ತರ ಮೇಲೆ ಕೇಸ್ ಹಾಕುತ್ತಿಲ್ಲ. ಕಾನೂನು ಉಲ್ಲಂಘನೆ ಮಾಡಿದವರ ವಿರುದ್ಧ ಕ್ರಮಕ್ಕೆ ಮುಂದಾಗಿದ್ದೇವೆ ಎಂದು ತಿಳಿಸಿದರು.

For Latest News Updates, Join Our Whatsapp Community🚩
RELATED ARTICLES

Most Popular