ದಾವಣಗೆರೆ : ರಾಜ್ಯ ಸರ್ಕಾರ ಕಾಂಗ್ರೆಸ್ ನವರು ರಾಮ ಭಕ್ತರನ್ನು ಹೆದರಿಸುವ ಕೆಲಸವನ್ನು ಮಾಡುತ್ತಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ.
ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಸೋಲಿನಭೀತಿ ಎದುರಾಗಿದೆ. ಹೀಗಾಗಿ ರಾಮಭಕ್ತರನ್ನು ಹೆದರಿಸಿ ದ್ವೇಷದ ರಾಜಕಾರಣ ಮಾಡುತ್ತಿದೆ ಎಂದು ಕಿಡಿಕಾರಿದ್ದಾರೆ.
ಅಯೋಧ್ಯೆಯ ರಾಮಮಂದಿರ ಉದ್ಘಾಟನೆಗೆ ದಿನಗಣನೆ ಆರಂಭವಾಗಿದೆ. ಇಡೀ ದೇಶ ರಾಮ ಭಕ್ತರು ಸಂತೋಷದಿಂದ ಇದ್ದಾರೆ. ಇಂತಹ ಸಂದರ್ಭದಲ್ಲಿ ರಾಜ್ಯ ಸರ್ಕಾರ ರಾಮಭಕ್ತರನ್ನು ಬೆದರಿಸುವ ಕೆಲಸ ಮಾಡುತ್ತಿದೆ. ರಾಜ್ಯದಲ್ಲಿ ಗಲಭೆ ಸೃಷ್ಠಿಗೆ ಕಾಂಗ್ರೆಸ್ ಕಾರಣವಾಗುತ್ತಿದೆ ಎಂದು ಹೇಳಿದರು.