HomeKarnatakaBIG NEWS : ಶಾಲಾ ವಾಹನಗಳಿಗೆ ʻಸಿಸಿಟೀವಿ, ಚಾಲಕರಿಗೆ ನಡತೆ ಪತ್ರʼ ಕಡ್ಡಾಯ

BIG NEWS : ಶಾಲಾ ವಾಹನಗಳಿಗೆ ʻಸಿಸಿಟೀವಿ, ಚಾಲಕರಿಗೆ ನಡತೆ ಪತ್ರʼ ಕಡ್ಡಾಯ

ಬೆಂಗಳೂರು : ಶಾಲಾ ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಎಲ್ಲಾ ಶಾಲಾ ವಾಹನಗಳಲ್ಲಿ ಸಿಸಿಟಿವಿ ಹಾಗೂ ಶಾಲಾ ವಾಹನಗಳ ಚಾಲಕರು ಹಾಗೂ ಸಹಾಯಕರಿಗೆ ಪೊಲೀಸ್‌ ಪರಿಶೀಲನೆಯನ್ನು ಕಡ್ಡಾಯ ಮಾಡಲಾಗಿದೆ.

ಶಾಲಾ ವಾಹನಗಳಲ್ಲಿ ಕಾರ್ಯನಿರ್ವಹಿಸುವ ಚಾಲಕರ ಪೊಲೀಸ್ ವೆರಿಫಿಕೇಷನ್ ಮಾಡಿಸುವ ಬಗ್ಗೆ ಕ್ರಮವಹಿಸಲು ತಿಳಿಸಲಾಗಿರುತ್ತದೆ.

ಕರ್ನಾಟಕ ಮೊಟಾರು ವಾಹನಗಳ ನಿಯಮಗಳು 1989ಕ್ಕೆ ತಿದ್ದುಪಡಿ ತಂದು Conditions for vehicles engaged in transport of school children Rules 2012, ಶಾಲಾ ಮಕ್ಕಳಿಗೆ ಸಾರಿಗೆ ಸೌಲಭ್ಯ ಒದಗಿಸುವ ಸಲುವಾಗಿ ಅಧಿಸೂಚನೆಯನ್ನು ಹೊರಡಿಸಲಾಗಿರುತ್ತದೆ. ಸದರಿ ಅಧಿಸೂಚನೆಯ ಕ್ರಮ ಸಂಖ್ಯೆ(4) ರಲ್ಲಿ ಈ ಕೆಳಕಂಡಂತೆ ವ್ಯಾಖ್ಯಾನಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕರ್ನಾಟಕ ಮೋಟಾರು ವಾಹನಗಳ ನಿಯಮಗಳು 1989 ನಿಯಮದಂತೆ “ಸ್ಕೂಲ್ ಕ್ಯಾಬ್ ಸೇಫ್ಟಿ ಕಮಿಟಿ” ರಚಿಸಲು ಉಲ್ಲೇಖ-2ರನ್ವಯ ಈ ಕಛೇರಿಯಿಂದ ಸುತ್ತೋಲೆಯನ್ನು ಹೊರಡಿಸಿರುವುದನ್ನು ಉಲ್ಲೇಖಿಸಿ ಶಾಲಾ ವಾಹನಗಳಲ್ಲಿ ಕಾರ್ಯನಿರ್ವಹಿಸುವ ಚಾಲಕರ ಮತ್ತು ವಾಹನಗಳ ಸಹಾಯಕರ ಪೊಲೀಸ್ ವೆರಿಫಿಕೇಷನ್ ಮಾಡಿಸುವ ಬಗ್ಗೆ ಎಲ್ಲಾ ಶಾಲಾ ಆಡಳಿತ ಮಂಡಳಿಗಳು ಕೆಳಕಂಡಂತೆ ಕ್ರಮವಹಿಸಲು ತಿಳಿಸಿದೆ.

  1. ಶಾಲಾ ವಾಹನಗಳಲ್ಲಿ ಮಕ್ಕಳನ್ನು ಮನೆಯಿಂದ ಶಾಲೆಗೆ ಹಾಗೂ ಶಾಲೆಯಿಂದ ಮನೆಗೆ ಕರೆತರುವ ಸಂದರ್ಭದಲ್ಲಿ ಖಾಸಗಿ ಶಾಲಾ ವಾಹನಗಳಲ್ಲಿ ಚಾಲಕರಿಂದ ಮತ್ತು ವಾಹನಗಳ ಸಹಾಯಕರಿಂದ ಮಕ್ಕಳ ಮೇಲೆ “ಎಸಗುತ್ತಿರುವಂತೆ ಪ್ರಕರಣಗಳು ದೌರ್ಜನ್ಯ ಎಸ ವರದಿಯಾಗುತ್ತಿರುವುದು’ ಗುತ್ತಿರುವುದು ಕಂಡುಬರುತ್ತಿದ್ದು. ಹಿನ್ನೆಲೆಯಲ್ಲಿ ಮಕ್ಕಳ ಸುರಕ್ಷತಾ ದೃಷ್ಟಿಯಿಂದ ಬಸ್. ವ್ಯಾನ್, ಆಟೋ ರಿಕ್ಷಾ ಮತ್ತು ಇತರೆ ಶಾಲಾ ವಾಹನಗಳಲ್ಲಿ ಕಾರ್ಯನಿರ್ವಹಿಸುತ್ತಿರುವಂತಹ ಎಲ್ಲಾ ಚಾಲಕರ ಮತ್ತು ಸಹಾಯಕರ ಮಾನಸಿಕ ಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಸಂಬಂಧಿಸಿದ ಪೊಲೀಸ್ ಠಾಣೆಗಳಿಂದ ಅವರ ನಡತೆಯ ಬಗ್ಗೆ ನಡವಳಿಕೆ ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ಪಡೆಯುವುದು.
  1. ಖಾಸಗಿ ಶಾಲಾ ವಾಹನಗಳಲ್ಲಿ, ಬಸ್, ವ್ಯಾನ್, ಆಟೋ ರಿಕ್ಷಾಗಳಲ್ಲಿ ಶಾಲಾ ಮಕ್ಕಳನ್ನು ಮನೆಯಿಂದ ಶಾಲೆಗೆ ಹಾಗೂ ಶಾಲೆಯಿಂದ ಮನೆಗೆ ಕರೆತರುವ ಕೆಲಸವನು ನಿರ್ವಹಿಸುವ ಚಾಲಕರು ಮತ್ತು ಸಹಾಯಕರ ನಡವಳಿಕೆ ಬಗ್ಗೆ ಸಂಬಂಧಿಸಿದ ಪೊಲೀಸ್ ಠಾಣೆಗಳಿಂದ ನಡತೆ ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ಪಡೆಯುವುದು ಹಾಗೂ ಪ್ರತಿ ಎರಡುವರ್ಷಗಳಿಗೊಮ್ಮೆ ನವೀಕರಿಸುವುದು.
  1. ಸದರಿ ಚಾಲಕರ ಮತ್ತು ಸಹಾಯಕರಿಗೆ ಸಂಬಂಧಿಸಿದಂತೆ ಪೊಲೀಸ್‌ ಠಾಣೆಗಳಿಂದ ಪಡೆದ ನಡವಳಿಕೆ ಪ್ರಮಾಣ ಪತ್ರವನ್ನು ಆಯಾ ಶಾಲೆಯ SATS ನಲ್ಲಿ ತಂತ್ರಾಂಶದಲ್ಲಿ Upload ಮಾಡುವುದು.
  1. ಖಾಸಗಿ ಶಾಲಾ ವಾಹನಗಳಲ್ಲಿ, ಬಸ್, ವ್ಯಾನ್, ಶಾಲಾ ಮಕ್ಕಳನ್ನು ಮನೆಯಿಂದ ಶಾಲೆಗೆ ಹಾಗೂ ಶಾಲೆಯಿಂದ ಮನೆಗೆ ಕರೆತರುವ ಕೆಲಸವನ್ನು ನಿರ್ವಹಿಸಲು ಸಹಾಯಕರಾಗಿ ಮಹಿಳಾ ಸಹಾಯಕರನ್ನು ನೇಮಿಸಿಕೊಳ್ಳಬೇಕು.
  1. ಪ್ರತಿ ಖಾಸಗಿ ಶಾಲಾ ವಾಹನಗಳಲ್ಲಿ ಕಡ್ಡಾಯವಾಗಿ ಸಿ.ಸಿ.ಕ್ಯಾಮರ ಅಳವಡಿಸುವುದು.
  1. ಶಾಲಾ ವಾಹನಗಳಲ್ಲಿ ನಿಗದಿತ ಸಂಖ್ಯೆಗಿಂತ ಹೆಚ್ಚು ಮಕ್ಕಳನ್ನು ಕರೆದುಕೊಂಡು ಹೋಗದಂತೆ ನಿರ್ಬಂಧಿಸುವುದು.
  1. ಶಾಲಾ ವಾಹನಗಳಲ್ಲಿ ಕೆಲಸ ನಿರ್ವಹಿಸುವ ಚಾಲಕರು ಮತ್ತು ಸಹಾಯಕರು ಪ್ರತಿದಿನ ಕೆಲಸ ಪ್ರಾರಂಭದ ಮೊದಲು ಮತ್ತು ಎಲ್ಲಾ ಮಕ್ಕಳನ್ನು ಮನೆಗೆ ಬಿಟ್ಟನಂತರ ಶಾಲೆಗೆ ಬಂದು ಹಾಜರಾತಿ ಪುಸ್ತಕದಲ್ಲಿ ಶಾಲಾ ಮುಖ್ಯಸ್ಥರ ಸಮ್ಮುಖದಲ್ಲಿ ಕಡ್ಡಾಯವಾಗಿ ಸಹಿ ಮಾಡುವುದು
  1. ಸದರಿ ಮಾಹಿತಿಗಳನ್ನು ಪ್ರತಿ ವರ್ಷ ವರ್ಷ ಆಯಾ ವ್ಯಾಪ್ತಿಯ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಸಲ್ಲಿಸಿ ಅನುಮೋದನೆಯನ್ನು ಪಡೆಯುವುದು.

ಮೇಲ್ಕಂಡ ಅಂಶಗಳನ್ನು ತಮ್ಮ ಮ್ಮ ವ್ಯಾಪ್ತಿಯ ఎలా ಶಾಲೆಗಳು ಕಟ್ಟುನಿಟ್ಟಾಗಿ ಅನುಸರಿಸುತ್ತಿರುವುದನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳು ಪರಿಶೀಲಿಸಿ ಖಾತ್ರಿಪಡಿಸಿಕೊಳ್ಳುವುದು. ಶಾಲಾ ಮಕ್ಕಳ ಮೇಲೆ ದೌರ್ಜನ್ಯಗಳಾಗದಂತೆ ತಡೆಗಟ್ಟಲು ಮೇಲ್ಕಂಡ ಅಂಶಗಳನ್ನು ಅನುಸರಿಸಲು ಶಾಲಾ ಆಡಳಿತ ಮಂಡಳಿ ಮತ್ತು ಮುಖ್ಯಸ್ಥರಿಗೆ ಸೂಚನೆ ನೀಡಲು ತಿಳಿಸಿದೆ. ಮಕ್ಕಳ ಸುರಕ್ಷತೆಗೆ ಸಂಬಂಧಿಸಿದಂತೆ ಯಾವುದೇ ನಿಯಮಗಳನ್ನು ಉಲ್ಲಂಘಿಸಿದಲ್ಲಿ ನಿಯಮಾನುಸಾರ ಶಿಸ್ತು ಕ್ರಮ ಜರುಗಿಸಲು ಸೂಕ್ತ ಕ್ರಮ ವಹಿಸುವುವಂತೆ ಸೂಚಿಸಿದೆ.

For Latest News Updates, Join Our Whatsapp Community🚩
RELATED ARTICLES

Most Popular