HomeKarnatakaಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಪರಿಣಾಮ ರಾಜ್ಯದಲ್ಲಿ ಜ. 10ರವರೆಗೆ ತುಂತುರು ಮಳೆ

ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಪರಿಣಾಮ ರಾಜ್ಯದಲ್ಲಿ ಜ. 10ರವರೆಗೆ ತುಂತುರು ಮಳೆ

ಬೆಂಗಳೂರು: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿದೆ. ಇದರ ಪರಿಣಾಮ ಜನವರಿ 10ರವರೆಗೆ ರಾಜ್ಯದಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಸಣ್ಣ ಪ್ರಮಾಣದ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಒಳನಾಡಿನ ಜಿಲ್ಲೆಗಳು, ಕರಾವಳಿ ಭಾಗದಲ್ಲಿ ಜನವರಿ 10ರವರೆಗೆ ಬಹುತೇಕ ಕಡೆ ಮೋಡ ಕವಿದ ವಾತಾವರಣ ಇರಲಿದೆ. ಇದರೊಂದಿಗೆ ತುಂತುರು ಮಳೆ ಆಗಲಿದೆ. ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಜನವರಿ 8 ರಿಂದ ಮೋಡ ಕವಿದ ವಾತಾವರಣ, ಮಳೆ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular