ನವದೆಹಲಿ : ಕೇಂದ್ರ ಸರ್ಕಾರವು ಲೋಕಸಭೆ ಚುನಾವಣೆಗೂ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಇಳಿಕೆ ಮಾಡುತ್ತದೆ ಎಂಬ ಸುದ್ದಿಗೆ ಕೇಂದ್ರ ಪೆಟ್ರೋಲಿಯಂ ಸಚಿವ ಹರ್ದೀಪ್ ಸಿಂಗ್ ಪುರಿ ಸ್ಪಷ್ಟನೆ ನೀಡಿದ್ದಾರೆ.
ಈ ಕುರಿತು ಮಾತನಾಡಿರುವ ಸಚಿವ ಹರ್ದೀಪ್ ಸಿಂಗ್ ಪುರಿ, ಪೆಟ್ರೋಲ್, ಡೀಸಲೆ ಬೆಲೆಯಲ್ಲಿ ಇಳಿಎಕ ಮಾಡಲಾಗುತ್ತದೆ ಎಂಬ ಸುದ್ದಿ ಹರಿದಾಡುತ್ತಿದ್ದು, ಇದು ವದಂತಿಯಷ್ಟೇ ಎಂದು ಹೇಳಿದ್ದಾರೆ.
ಲೋಕಸಭೆ ಚುನಾವಣೆ ಹಾಗೂ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ ಇಳಿಕೆ ಹಿನ್ನೆಲೆಯಲ್ಲಿ ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ಕೇಂದ್ರ ಸರ್ಕಾರ ಇಳಿಕೆ ಮಾಡಲಿದೆ ಎಂಬ ಸುದ್ದಿ ಹರಿದಾಡಿತ್ತು, ಇದಕ್ಕೆ ಪ್ರತಿಕ್ರಿಯೆ ನೀಡಿರುವ ಸಚಿವ ಹರ್ದೀಪ್ ಸಿಂಗ್ ಪುರಿ, ಪೆಟ್ರೋಲ್, ಡೀಸೆಲ್ ಇಳಿಕೆ ಸಂಬಂಧ ಕೇಂದ್ರ ಸರ್ಕಾರವು ತೈಲ ಕಂಪನಿಗಳೊಂದಿಗೆ ಯಾವುದೇ ಮಾತುಕತೆಯೂ ನಡೆಸಿಲ್ಲ. ದರ ಇಳಿಕೆಯ ಪ್ರಸ್ತಾಪವೂ ಸರ್ಕಾರದ ಮುಂದೆ ಇಲ್ಲ ಎಂದು ತಿಳಿಸಿದ್ದಾರೆ.