HomeKarnataka‘ಶಕ್ತಿ ಯೋಜನೆ’ ಯಶಸ್ಸಿನ ಬಗ್ಗೆ ಸಚಿವ ರಾಮಲಿಂಗಾ ರೆಡ್ಡಿ ಪೋಸ್ಟ್ : ಮಾಜಿ ಸಿಎಂ 'HDK'...

‘ಶಕ್ತಿ ಯೋಜನೆ’ ಯಶಸ್ಸಿನ ಬಗ್ಗೆ ಸಚಿವ ರಾಮಲಿಂಗಾ ರೆಡ್ಡಿ ಪೋಸ್ಟ್ : ಮಾಜಿ ಸಿಎಂ ‘HDK’ ಗೆ ಟಾಂಗ್

ಬೆಂಗಳೂರು : ‘ಶಕ್ತಿ ಯೋಜನೆ’ ಯಶಸ್ಸಿನ ಬಗ್ಗೆ ಸಚಿವ ರಾಮಲಿಂಗಾ ರೆಡ್ಡಿ  ಸೋಶಿಯಲ್ ಮೀಡಿಯಾದಲ್ಲಿ   ಪೋಸ್ಟ್ ಹಂಚಿಕೊಂಡಿದ್ದು, ಮಾಜಿ ಸಿಎಂ ಕುಮಾರಸ್ವಾಮಿಗೆ ಟಾಂಗ್ ನೀಡಿದ್ದಾರೆ.

ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದೇನು..?

1. ಸಾರಿಗೆ ಸಂಸ್ಥೆಗಳ ಅಭಿವೃದ್ಧಿಯ ಎರಡು ಮುಖಗಳು ಅಂದರೆ, ಕಾಲಕಾಲಕ್ಕೆ ನೇಮಕಾತಿ ಹಾಗೂ ಹೊಸ ಬಸ್ಸುಗಳ ಸೇರ್ಪಡೆಯಾಗಿದೆ.  ಆದರೆ ದುರಂತವೆಂದರೆ, ಕಳೆದ 5 ವರ್ಷಗಳಲ್ಲಿ ಸಾರಿಗೆ ಸಂಸ್ಥೆಗಳಲ್ಲಿ 13,888 ಹುದ್ದೆಗಳು ಖಾಲಿ ಇದ್ದರೂ ( ನಿವೃತ್ತಿ ಇನ್ನಿತರೆ ಕಾರಣಗಳಿಂದ) ಒಂದೇ ಒಂದು ನೇಮಕಾತಿ ಆಗಿಲ್ಲ.ನಮ್ಮ ಸರ್ಕಾರ ಸಾರಿಗೆ ಸಂಸ್ಥೆಗಳಲ್ಲಿ 8,900 ಖಾಯಂ ನೇಮಕಾತಿಗೆ ಚಾಲನೆ ನೀಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

2. ಮತ್ತೊಂದು ಮಹಾ ದುರಂತವೆಂದರೆ, ಸಂಸ್ಥೆಯಲ್ಲಿರುವ ಕೆಲವು ಡಕೋಟಾ ಬಸ್ಸುಗಳು, ಕಳೆದ 5 ವರ್ಷಗಳಲ್ಲಿ ಬಸ್ಗಳ ಸೇರ್ಪಡೆ ಆಗಿಲ್ಲ, ಕಳಪೆ ಸ್ಥಿತಿಯ ಬಸ್ಸುಗಳನ್ನು ಕಾರ್ಯಾಚರಣೆ ಮಾಡುವುದು ಪ್ರಯಾಣಿಕರ ಹಿತದೃಷ್ಟಿಯಿಂದ ಸಾಧುವಲ್ಲದ ಕಾರಣ, ನಿಷ್ಕ್ರಿಯಗೊಳಿಸುವ ಕಾರ್ಯ ಒಂದೆಡೆಯಾದರೆ, 900 ಬಸ್ಸುಗಳನ್ನು ಪುನಶ್ಚೇತನಗೊಳಿಸುವ ಕಾರ್ಯ ಕೂಡ ನಡೆದಿದೆ.

3. ಇದರೊಂದಿಗೆ, ಸಾರಿಗೆ ಸಂಸ್ಥೆಗಳಲ್ಲಿ 5,900 ಹೊಸ ಬಸ್ಸುಗಳನ್ನು ಸೇರ್ಪಡೆಗೊಳಿಸುವ ಪ್ರಕ್ರಿಯೆ ಈಗಾಗಲೇ ಪ್ರಾರಂಭವಾಗಿದೆ . ನಾಲ್ಕು ನಿಗಮಗಳಲ್ಲಿ ಹೊಸ ಬಸ್ಸುಗಳ ಸೇರ್ಪಡೆ ತ್ವರಿತಗತಿಯಲ್ಲಿ ಸಾಗಿದೆ.

4. ಸಾರಿಗೆ ಸಂಸ್ಥೆಗಳು ಪ್ರತಿದಿನ 1,58,000 ಟ್ರಿಪ್ ಗಳನ್ನು ಕಾರ್ಯಾಚರಣೆಗೊಳಿಸುತ್ತಿವೆ. ಬಸ್ಸುಗಳ ಕಾರ್ಯಾಚರಣೆ ತೊಂದರೆಯಾಗಿರುವಂತಹ ಒಂದೆರಡು ಘಟನೆಗಳು ಈ ಹಿಂದೆಯೂ ವರದಿಯಾಗುತ್ತಿದ್ದವು. ಆದರೆ ಶಕ್ತಿ ಯೋಜನೆ ತರುವಾಯ, ಈ ಯೋಜನೆಯ ಯಶಸ್ಸನ್ನು ಸಹಿಸದೆ, ಈ ರೀತಿಯ ಒಂದೆರಡು ಘಟನೆಗಳಿಗೂ ಕೂಡ ಶಕ್ತಿ ಯೋಜನೆಯನ್ನು ದೂಷಿಸುವಂತಹ ವ್ಯವಸ್ಥಿತ ಅಪಪ್ರಚಾರವನ್ನು ವಿಪಕ್ಷಗಳು ಮಾಡುತ್ತಿರುವುದು ವಿಪರ್ಯಾಸ.

5 ಮಾನ್ಯ ಶ್ರೀ. ಕುಮಾರಸ್ವಾಮಿ ಅವರು ಹೇಳಿದಂತೆ, ಶಕ್ತಿ ಯೋಜನೆ ಉಪಯೋಗಿ ಯೋಜನೆ ಎಂದು ಒಪ್ಪಿಕೊಂಡರೂ ಸಹ, ಸಾರ್ವಜನಿಕರಿಗೆ ಸಮಗ್ರ ಸಾರಿಗೆ ಸೌಲಭ್ಯ ಒದಗಿಸುವಲ್ಲಿ, BJP Karnataka
ಆಡಳಿತಾವಧಿಯಲ್ಲಿ ನೇಮಕಾತಿ ಹಾಗೂ ಬಸ್ಸುಗಳ ಸೇರ್ಪಡೆಯಾಗದೇ ಇರುವ ಬಗ್ಗೆ ಮಾನ್ಯ ಮಾಜಿ ಮುಖ್ಯಮಂತ್ರಿಗಳು ಚಕಾರವೆತ್ತದಿರುವುದು ಆಶ್ಚರ್ಯಕರ ಸಂಗತಿ.

6. ಶಕ್ತಿ ಯೋಜನೆಯಿಂದ ಮಹಿಳೆಯರು ಪ್ರವಾಸ ಸ್ಥಳಗಳಿಗೆ ಮಾತ್ರ ಮುಗಿಬಿದ್ದಿದ್ದಾರೆ ಎಂದು ಅರ್ಥೈಸುವುದು ಕೆಟ್ಟಮನಸ್ಥಿತಿಯನ್ನು ಪ್ರತಿಬಿಂಬಿಸುತ್ತದೆ. ಶಿಕ್ಷಣ, ಉದ್ಯೋಗ, ದೇವರ ದರ್ಶನ ಮುಂತಾದ ಕಾರಣಗಳಿಗಾಗಿ ನಾಡಿನ ಹೆಣ್ಣುಮಕ್ಕಳು ಈ ಯೋಜನೆಯನ್ನು ಉಪಯೋಗಿಸಿಕೊಂಡು ಅವರು ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಈ ಯೋಜನೆ ತನ್ನದೇ ಆದ ಕೊಡುಗೆ ನೀಡಿದೆ.

7. ಶಕ್ತಿ ಯೋಜನೆ ಜಾರಿಯಾಗಿ 6 ತಿಂಗಳುಗಳಲ್ಲಿ 126 ಕೋಟಿಗೂ ಅಧಿಕ ಉಚಿತ ಟಿಕೆಟ್ ಪಡೆದು ಪ್ರಯಾಣಿಸಿದ ಪ್ರತಿಯೊಬ್ಬ ಮಹಿಳೆಯರು ಪ್ರವಾಸಿ ಸ್ಥಳಕ್ಕೆ ಹೋಗಿದ್ದಾರೆ ಎಂಬುದು ಅಕ್ಷಮ್ಯ. ಇದರಲ್ಲಿ ಶಾಲಾ ಕಾಲೇಜಿಗೆ, ಉದ್ಯೋಗಕ್ಕೆ, ಮನೆಕೆಲಸ, ಗಾರ್ಮೆಂಟ್ ಫ್ಯಾಕ್ಟರಿಗೆ ಹೋಗುವ ವಿದ್ಯಾರ್ಥಿನಿಯರು/ ಮಹಿಳೆಯರು ಸೇರಿದ್ದಾರೆ ಎಂಬುದನ್ನು ಮಾನ್ಯ ಕುಮಾರಸ್ವಾಮಿಯವರು ಮರೆಯಬಾರದು ಎಂದು ಸಚಿವ ರಾಮಲಿಂಗಾ ರೆಡ್ಡಿ ಪೋಸ್ಟ್ ಹಂಚಿಕೊಂಡಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular