ಹುಬ್ಬಳ್ಳಿ: ಕರಸೇವಕರ ಬಂಧನ ಖಂಡಿಸಿ ವಿಪಕ್ಷ ಬಿಜೆಪಿ ರಾಜ್ಯಾದ್ಯಂತ ಪ್ರತಿಭಟನೆ ತೀವ್ರಗೊಳಿಸಿರುವ ಬೆನ್ನಲ್ಲೇ ಹುಬ್ಬಳ್ಳಿ ಶಹರ ಠಾಣೆ ಇನ್ಸ್ ಪೆಕ್ಟರ್ ರನ್ನು ಕಡ್ಡಾಯ ರಜೆ ಮೇಲೆ ಕಳುಹಿಸಲಾಗಿದೆ.
ಕರಸೇವಕ ಶ್ರೀಕಾಂತ್ ಪೂಜಾರಿ ಬಂಧನ ಖಂಡಿಸಿ ಜನವರಿ 3ರಂದು ವಿಪಕ್ಷ ನಾಯಕ ಆರ್.ಅಶೋಕ್ ನೇತೃತ್ವದಲ್ಲಿ ಹುಬ್ಬಳ್ಳಿ ಶಹರ ಠಾಣೆಗೆ ಮುತ್ತಿಗೆ ಹಾಕಲು ಬಿಜೆಪಿ ಕಾರ್ಯಕರ್ತರು ಯತ್ನಿಸಿದ್ದರು. ಅಲ್ಲದೇ ಶಹರ ಠಾಣೆ ಇನ್ಸ್ ಪೆಕ್ಟರ್ ಮೊಹಮ್ಮದ್ ರಫೀಕ್ ಅವರನ್ನು ಸಸ್ಪೆಂಡ್ ಮಾಡುವಂತೆ ಆಗ್ರಹಿಸಿದ್ದರು.
ಇಂದು ಕೂಡ ಬಿಜೆಪಿ ಪ್ರತಿಭಟನೆ ಮುಂದುವರಿದಿದೆ. ಈ ನಡುವೆ ಹುಬ್ಬಳ್ಳಿ ಶಹರ ಠಾಣೆ ಇನ್ಸ್ ಪೆಕ್ಟರ್ ಮೊಹಮ್ಮದ್ ರಫೀಕ್ ಅವರನ್ನು ಕಡ್ಡಾಯ ರಜೆ ಮೇಲೆ ಕಳುಹಿಸಲಾಗಿದೆ. ಅವರ ಜಾಗಕ್ಕೆ ಪ್ರಭಾರಿ ಇನ್ಸ್ ಪೆಕ್ಟರ್ ಆಗಿ ಬಿ.ಎ.ಜಾದವ್ ಅವರನ್ನು ನೇಮಕ ಮಾಡಲಾಗಿದೆ.