HomeKarnataka48 ಗಂಟೆಗಳಲ್ಲಿ ಶ್ರೀಕಾಂತ್ ಪೂಜಾರಿ ಬಿಡುಗಡೆ ಮಾಡಲಿ; ಇಲ್ಲವಾದಲ್ಲಿ ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ; ಸರ್ಕಾರಕ್ಕೆ ಎನ್....

48 ಗಂಟೆಗಳಲ್ಲಿ ಶ್ರೀಕಾಂತ್ ಪೂಜಾರಿ ಬಿಡುಗಡೆ ಮಾಡಲಿ; ಇಲ್ಲವಾದಲ್ಲಿ ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ; ಸರ್ಕಾರಕ್ಕೆ ಎನ್. ರವಿಕುಮಾರ್ ಎಚ್ಚರಿಕೆ

ಮಂಗಳೂರು: ಕರಸೇವಕ ಶ್ರೀಕಾಂತ್ ಪೂಜಾರಿಯನ್ನು 48 ಗಂಟೆಗಳಲ್ಲಿ ಬಿಡುಗಡೆ ಮಾಡುವಂತೆ ರಾಜ್ಯ ಸರ್ಕಾರಕ್ಕೆ ವಿಧಾನಪರಿಷತ್ ಮುಖ್ಯ ಸಚೇತಕ ಎನ್.ರವಿಕುಮಾರ್ ಆಗ್ರಹಿಸಿದ್ದಾರೆ.

ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರವಿಕುಮಾರ್, ವಿನಾಶಕಾಲೇ ವಿಪರೀತ ಬುದ್ಧಿ ಎಂಬಂತೆ ಕಾಂಗ್ರೆಸ್ ಆಡಳಿತ ನಡೆಸುತ್ತಿದೆ. ರಾಜ್ಯದಲ್ಲಿ ನಾಡದ್ರೋಹಿ, ದೇಶದ್ರೋಹಿ ಸರ್ಕಾರವಿದೆ ಎಂದು ಕಿಡಿಕಾರಿದ್ದಾರೆ.

ಶ್ರೀಕಾಂತ್ ಪೂಜಾರಿಯನ್ನು 48 ಗಂಟೆಗಳಲ್ಲಿ ಬಿಡುಗಡೆ ಮಾಡಬೇಕು. ಇಲ್ಲವಾದಲ್ಲಿ ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ ತೀವ್ರಗೊಳಿಸಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular