alex Certify BREAKING : ದಕ್ಷಿಣ ಆಫ್ರಿಕಾ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ ‘ಟೀಂ ಇಂಡಿಯಾ’ಗೆ ಭರ್ಜರಿ ಗೆಲುವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ದಕ್ಷಿಣ ಆಫ್ರಿಕಾ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ ‘ಟೀಂ ಇಂಡಿಯಾ’ಗೆ ಭರ್ಜರಿ ಗೆಲುವು

ದಕ್ಷಿಣ ಆಫ್ರಿಕಾ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಭರ್ಜರಿ ಗೆಲುವು ಸಾಧಿಸಿದೆ.
ಕೇಪ್ ಟೌನ್ ನ ನ್ಯೂಲ್ಯಾಂಡ್ಸ್ ಕ್ರಿಕೆಟ್ ಮೈದಾನದಲ್ಲಿ ದಕ್ಷಿಣ ಆಫ್ರಿಕಾವನ್ನು ಏಳು ವಿಕೆಟ್ ಗಳಿಂದ ಸೋಲಿಸುವ ಮೂಲಕ ಭಾರತವು ಎರಡು ಪಂದ್ಯಗಳ ಟೆಸ್ಟ್ ಸರಣಿಯನ್ನು ಸಮಬಲಗೊಳಿಸಿತು.

ಈ ಗೆಲುವಿನೊಂದಿಗೆ ರೋಹಿತ್ ಶರ್ಮಾ ಎಂಎಸ್ ಧೋನಿ ನಂತರ ದಕ್ಷಿಣ ಆಫ್ರಿಕಾದಲ್ಲಿ ಟೆಸ್ಟ್ ಸರಣಿ ಸೋಲನ್ನು ತಪ್ಪಿಸಿದ ಎರಡನೇ ಭಾರತೀಯ ನಾಯಕ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಈ ಸರಣಿಗೂ ಮುನ್ನ ಭಾರತ 1992ರಿಂದೀಚೆಗೆ ದಕ್ಷಿಣ ಆಫ್ರಿಕಾದಲ್ಲಿ ಏಳು ಟೆಸ್ಟ್ ಸರಣಿಗಳನ್ನು ಸೋತಿತ್ತು ಮತ್ತು ಒಂದು ಟೆಸ್ಟ್ ಸರಣಿಯನ್ನು ಡ್ರಾ ಮಾಡಿಕೊಂಡಿತ್ತು. ಕುತೂಹಲಕಾರಿ ಸಂಗತಿಯೆಂದರೆ, ಇದು ಕೇಪ್ ಟೌನ್ ನಲ್ಲಿ ಭಾರತದ ಮೊದಲ ಟೆಸ್ಟ್ ಗೆಲುವಾಗಿದೆ.

ದಕ್ಷಿಣ ಆಫ್ರಿಕಾ 176 ರನ್ ಗಳಿಗೆ ಆಲೌಟ್ ಆಗಿದ್ದು, ರೋಹಿತ್ ಶರ್ಮಾ ಮತ್ತು ತಂಡವು ಆತಿಥೇಯರನ್ನು 7 ವಿಕೆಟ್ ಗಳಿಂದ ಸೋಲಿಸಿ ಎರಡನೇ ಟೆಸ್ಟ್ ಪಂದ್ಯವನ್ನು ಗೆದ್ದುಕೊಂಡಿತು. ಈ ಗೆಲುವಿನೊಂದಿಗೆ ರೋಹಿತ್ ಪಡೆ ಟೆಸ್ಟ್ ಸರಣಿಯನ್ನು 1-1ರಿಂದ ಸಮಬಲಗೊಳಿಸಿದೆ.

 

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...