![](https://kannadadunia.com/wp-content/uploads/2024/01/farmers-2.jpg)
ಬೆಂಗಳೂರು : ಅರಣ್ಯ ಭೂಮಿಯಲ್ಲಿ ಕೃಷಿ ಮಾಡುತ್ತಿರುವ ರೈತರು ಮೂರು ಎಕರೆಗಿಂತ ಹೆಚ್ಚು ಹೊಂದಿದ್ದರೆ ಅಂತಹ ರೈತರಿಗೆ ಹಕ್ಕುಪತ್ರ ನೀಡಲಾಗುವುದಿಲ್ಲ ಎಂದು ರಾಜ್ಯ ಸರ್ಕಾರ ಸ್ಪಷ್ಟನೆ ನೀಡಿದೆ.
ಈ ಕುರಿತು ಅರಣ್ಯ ಸಚಿವ ಈಶ್ವರ್ ಖಂಡ್ರೆ ಮಾಹಿತಿ ನೀಡಿದ್ದು, ಅರಣ್ಯ ಭೂಮಿಯಲ್ಲಿ ಕೃಷಿ ಮಾಡುತ್ತಿರುವ ರೈತರಿಗೆ ಈ ತಿಂಗಳೊಳಗೆ ಹಕ್ಕುಪತ್ರ ನೀಡಲು ರಾಜ್ಯ ಸರ್ಕಾರ ಸಜ್ಜಾಗಿದೆ. ಆದರೆ 3 ಎಕರೆಗಿಂತ ಹೆಚ್ಚಿನ ಭೂಮಿ ನೀಡುವುದಿಲ್ಲ ಎಂದು ತಿಳಿಸಿದ್ದಾರೆ.
ನಿಗದಿತ ಅವಧಿಯೊಳಗೆ ಅರ್ಜಿ ಸಲ್ಲಿಸಿರುವ 13,750 ಪ್ರಕರಣಗಳ 31,864 ಎಕರೆ ಭೂಮಿ ಇದೆ. ಈ ಪೈಕಿ 7 ಸಾವಿರ ಪ್ರಕರಣಗಳಿಗೆ ಶೀಘ್ರವೇ ಹಕ್ಕು ಪತ್ರ ನೀಡಲಾಗುವುದು ಎಂದು ಹೇಳಿದ್ದಾರೆ.