alex Certify ವಾಯುಭಾರ ಕುಸಿತ ಪರಿಣಾಮ ನಾಲ್ಕೈದು ದಿನ ಮಳೆ: 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಾಯುಭಾರ ಕುಸಿತ ಪರಿಣಾಮ ನಾಲ್ಕೈದು ದಿನ ಮಳೆ: 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಬೆಂಗಳೂರು: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಪರಿಣಾಮ ರಾಜ್ಯದಲ್ಲಿ ಮುಂದಿನ 4-5 ದಿನ ವ್ಯಾಪಕ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಜನವರಿ 5, 6 ರಂದು ಭಾರೀ ಮಳೆಯಾಗುವ ಸಂಭವ ಇರುವುದರಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಜನವರಿ 5ರಂದು ಉಡುಪಿ, ಚಿಕ್ಕಮಗಳೂರು, ಹಾಸನ, ಮಂಡ್ಯ, ಮೈಸೂರಿನಲ್ಲಿ ಭಾರಿ ಮಳೆ ಬೀಳುವ ಸಾಧ್ಯತೆ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ನೀಡಿದೆ.

ತುಮಕೂರು, ವಿಜಯನಗರ, ಶಿವಮೊಗ್ಗ, ಕೋಲಾರ, ಕೊಡಗು, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬಳ್ಳಾರಿ ಜಿಲ್ಲೆಗಳಲ್ಲಿ ಮುಂದಿನ 5 ದಿನಗಳ ಕಾಲ ಹಗುರದಿಂದ ಕೂಡಿದ ಸಾಧಾರಣ ಮಳೆ ಆಗಲಿದೆ. ರಾಜ್ಯದಾದ್ಯಂತ ಮುಂದಿನ 4 ದಿನಗಳ ಕಾಲ ಮೋಡ ಕವಿದ ವಾತಾವರಣ ಇರಲಿದ್ದು, ಉಷ್ಣಾಂಶ ಕುಸಿತವಾಗಿ ಶೀತದ ವಾತಾವರಣ ಇರಲಿದೆ. ಹಾಸನ ಸೇರಿದಂತೆ ರಾಜ್ಯದ ಹಲವು ಕಡೆ ಗುರುವಾರ ಮಳೆಯಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...